ಸಂಸದ ಬಸವರಾಜ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯ ಪುತ್ರ ಆತ್ಮಹತ್ಯೆ

ಅಂತಿಮ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಹೇಮಂತ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ  ಹೇಮಂತ್  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಡಿಪ್ಲೊಮಾ‌ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (22) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈ ಘಟನೆ ಬೆಂಗಳೂರಿನ ಸಂಜಯ ನಗರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ನಡೆದಿದೆ. 

ಸ್ಥಳಕ್ಕೆ ಸಂಜಯ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಎಂ. ಎಸ್. ರಾಮಯ್ಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

 ಎಂ. ಎಸ್. ರಾಮಯ್ಯ ಕಾಲೇಜಿನಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಹೇಮಂತ್ ಕುಟುಂಬದೊಂದಿಗೆ  ತಿರುಪತಿಗೆ ತೆರಳಲು ಸಜ್ಜಾಗಿದ್ದರು. ಊರಿಂದ ಸಂಬಂಧಿಕರು ಸಹ ಬಂದಿದ್ದು, ಎಲ್ಲರೂ ಇಂದು ಮುಂಜಾನೆ ತಿರುಪತಿಗೆ ಹೊರಡಲು ಸಿದ್ಧತೆ ನಡೆಸಿದ್ದರು. ಆದರೆ, ಬೆಳಿಗ್ಗೆ ಹೇಮಂತ್ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ.

More articles

Latest article

Most read