ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. ಲೋಕಾಯುಕ್ತ ತನಿಖೆಯಲ್ಲಿ ನ್ಯಾಯ ಸಿಗಲಾರದು. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು.
ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ವಾದ ಮಂಡಿಸಿದರು. ವಿಚಾರಣೆಯನ್ನು ಮುಂದೂಡದಂತೆ ಸ್ನೇಹಮಯಿ ಕೃಷ್ಣ ಪರ ಕೆ.ಜಿ.ರಾಘವನ್ ವಾದಿಸಿದರು. ಈ ಸಂದರ್ಭದಲ್ಲಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಹಾಜರಿದ್ದರು.