ಮುಡಾ ಪ್ರಕರಣ: ಸಿಎಂ ಕುಟುಂಬಕ್ಕೆ ಕ್ಲೀನ್‌ ಚಿಟ್;‌ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್‌

Most read

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)  ನಿವೇಶನ ಹಂಚಿಕೆ ಪ್ರಕರಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ  ಪತ್ನಿ ಪಾವರ್ತಿ, ಬಾವಮೈದುನ ಮಲ್ಲಿಕಾರ್ಜುನ್, ಜಮೀನು ಮಾಲೀಕ ದೇವರಾಜು ಅವರನ್ನು ನಿರ್ದೋಷಿಗಳು ಎಂದು ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ್ ತಮ್ಮ ತನಿಖಾ ವರದಿಯಲ್ಲಿ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.

ಲೋಕಾಯುಕ್ತ ಎಸ್‌ ಪಿ ಉದೇಶ್ ಅವರು ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದು, ನೀವು ನೀಡಿದ ದೂರು ಸಂಬಂಧ 1ನೇ ಆರೋಪಿಯಿಂದ 4ನೇ ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದಾಗಿದೆ. ಹಾಗೆಯೇ ಈ ಪ್ರಕರಣ ತನಿಖೆ ನಡೆಸಲು ತಕ್ಕುದಲ್ಲ, ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇವೆ. ಜೊತೆಗೆ ಸಾಕಷ್ಟು ಸಾಕ್ಷ್ಯಾಧಾರಗಳ ಕೊರೆತೆಯಿದೆ. ಎಲ್ಲಾ ಆರೋಪಿಗಳ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪ ಸಾಬೀತಾಗಿಲ್ಲ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಈ ವರದಿಯನ್ನು ವಿರೋಧಿಸುವುದಿದ್ದರೆ, ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟ್‌ ಅವರ ಹಾಜರಾಗಿ ವಿರೋಧಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಆರೋಪಿ-1 ರಿಂದ ಆರೋಪಿ-4 ರವರೆಗಿನ ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲವಾದ್ದರಿಂದ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ.  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ನೇ ಸಾಲಿನಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿ.ಆರ್.ಪಿ.ಸಿ ರೀತ್ಯಾ ಹೆಚ್ಚುವರಿ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ನೋಟಿಸ್ ನಲ್ಲಿ ಉದೇಶ್ ತಿಳಿಸಿದ್ದಾರೆ.

More articles

Latest article