ಮುಡಾ ಪ್ರಕರಣ: ನಾಳೆ ಲೋಕಾಯುಕ್ತ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಹಾಜರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬುಧವಾರ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಲಿದ್ದಾರೆ. ಹಳೆಯ ಪ್ರವಾಸದ ಪಟ್ಟಿಯಲ್ಲಿ ಬೆಳಗ್ಗೆ 1೦ ಗಂಟೆಯಿಂದ ಚನ್ನಪಟ್ಟಣದ ಪ್ರವಾಸದ ವಿವರ ಮಾತ್ರ ಇತ್ತು. ಇದೀಗ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೊದಲು ಮೈಸೂರಿಗೆ ಆಗಮಿಸಿ ವಿಚಾರಣೆಯಲ್ಲಿ ಭಾಗಿಯಾಗಿ ನಂತರ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ ಅವರು ಬೆಳಗ್ಗೆ 7:30 ಕ್ಕೆ ಬೆಂಗಳೂರಿನಿಂದ ಹೊರಟು 9:30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ನಂತರ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ಮುಡಾ ಪ್ರಕರಣದ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ವಿಚಾರಣೆಗಾಗಿ ಎರಡೂವರೆ ತಾಸು ಮೀಸಲಿಡಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಟಿ ಜೆ ಉದೇಶ್ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದೆ. ಮುಖ್ಯಮಂತ್ರಿಗಳಿಗೆ ಕೇಳಲು ಲೋಕಾಯುಕ್ತ ಪೊಲೀಸರು ಪ್ರಶ್ನೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ವಿಚಾರಣೆ ಮುಗಿದ ಬಳಿಕ ಮಧ್ಯಾಹ್ನ 12ಕ್ಕೆ ಮೈಸೂರಿನಿಂದ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಆಗಮಿಸಲಿದ್ದಾರೆ.

More articles

Latest article

Most read