ಮುಡಾ ಪ್ರಕರಣ; ಡಿಸೆಂಬರ್ 19ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರವನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಲಾಗಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿದ್ದು ನ್ಯಾಯ ಸಿಗುವ ವಿಶ್ವಾಸ ಇಲ್ಲ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿದಾರರು ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ವಿಚಾರಣೆ ನಡೆಸುತ್ತಿದೆ.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕೆ.ಜಿ.ರಾಘವನ್ ಮತ್ತು ದುಷ್ಯಂತ್‌ ದವೆ ವಾದಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಮತ್ತು ಕಪಿಲ್‌ ಸಿಬಲ್‌ ವಾದ ಮಂಡಿಸುತ್ತಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್‌ ಅವರಿಗೆ ಕೆಲವರು ನಿಂದಿಸಿ ಪತ್ರ ಬರೆದಿರುವ ವಿಚಾರವನ್ನು ಕಪಿಲ್‌ ಸಿಬಲ್‌ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆಗ ನ್ಯಾಯಮೂರ್ತಿಗಳು ನಿಮ್ಮ ಕಕ್ಷಿದಾರರರಿಗೆ ಎಚ್ಚರಿಕೆಯಿಂದ ಇರಲು ಹೇಳಿ ಎಂದು ರಾಘವನ್‌ ಅವರಿಗೆ ಸೂಚನೆ ನೀಡಿದ್ದಾರೆ. ಈವರೆಗೆ ನಡೆದಿರುವ ತನಿಖೆಯ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ.

More articles

Latest article

Most read