ಮೈಸೂರು ಮುಡಾ ಪ್ರಕರಣ: ಮೇಲ್ಮನವಿ ಸಲ್ಲಿಸಿದ ಜಾರಿ ನಿರ್ದೇಶನಾಲಯ

Most read


ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ ಅರ್ಜಿಯನ್ನು ಮಾನ್ಯ ಮಾಡಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠಕ್ಕೆ ಜಾರಿ ನಿರ್ದೇಶನಾಲಯ ಮೇಲ್ಮನವಿ ಸಲ್ಲಿಸಿದೆ.

ಈ ಸಂಬಂಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲಾಗಿದ್ದು, ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಏಪ್ರಿಲ್‌ 8ಕ್ಕೆ ಮುಂದೂಡಿದೆ.

ಜಾರಿ ನಿರ್ದೇಶನಾಲಯ ನನ್ನ ನಿವಾಸದಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ದಾಖಲು ಮಾಡಿಕೊಂಡಿರುವ ನನ್ನ ಹೇಳಿಕೆ ಕಾನೂನು ಬಾಹಿರ ಎಂದು ಆಕ್ಷೇಪಿಸಿ ನಟೇಶ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನು ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿತ್ತು.

More articles

Latest article