ಮಾಜಿ ಮುಡಾ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಹಾವೇರಿ ವಿವಿ ಕುಲಸಚಿವರಾಗಿ ನೇಮಕ

ಮಾಜಿ ಮುಡಾ ಆಯುಕ್ತ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ.

50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಆರೋಪ ಕೇಳಿ ಬಂದ ತಕ್ಷಣ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಯಾವುದೇ ಸ್ಥಳ ತೋರಿಸದೇ ಮುಡಾ ಆಯುಕ್ತರಾಗಿದ್ದ ಅವರನ್ನು ವರ್ಗಾವಣೆ ಮಾಡಲಾಗಿತ್ತು.

2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ಈಗ ಹಾವೇರಿ ವಿವಿಯ ಕುಲಸಚಿವರಾಗಿ ವರ್ಗಾವಣೆ ಮಾಡಿದ್ದಾರೆ.

More articles

Latest article

Most read