ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟೀಸ್

Most read

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ. 6ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎರಡನೇ ಆರೋಪಿಯಾಗಿದ್ದಾರೆ. ಅವರ ಪತ್ನಿ ಪಾರ್ವತಿ ಅವರು ಮೊದಲ ಮತ್ತು ಮುಖ್ಯಮಂತ್ರಿಗಳ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಮೂರನೇ ಮತ್ತು ಭೂ ಮಾಲೀಕ ದೇವರಾಜು ನಾಲ್ಕನೇ ಆರೋಪಿಯಾಗಿದ್ದಾರೆ.

ಲೋಕಾಯುಕ್ತ ಪೊಲೀಸರು ಈಗಾಗಲೇ ಎ-1 ಪಾರ್ವತಿ, ಎ-3 ಮಲ್ಲಿಕಾರ್ಜುನ ಸ್ವಾಮಿ, ಎ-4 ದೇವರಾಜು ಅವರ ವಿಚಾರಣೆ ನಡೆಸಿದ್ದಾರೆ.

ಹೈಕೋರ್ಟ್‌ ಆದೇಶದಂತೆ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತೊಂದು ಕಡೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸುತ್ತಿದೆ.

ನವೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

More articles

Latest article