ಮುಡಾ: ಸಿಎಂ  ಸಿದ್ದರಾಮಯ್ಯ, ಪತ್ನಿ ವಿರುದ್ಧದ ಮೇಲ್ಮನವಿ ರದ್ದು: ಇಡಿಗೆ ಸುಪ್ರೀಂಕೋರ್ಟ್‌ ತರಾಟೆ

Most read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ನಿವೇಶನಗಳ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದು ಸಿಎಂ ಅವರಿಗೆ ಸಿಕ್ಕ ದೊಡ್ಡ ಜಯವಾಗಿದೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠ ರಾಜಕೀಯ ಹೋರಾಟಗಳು ಚುನಾವಣೆಯಲ್ಲಿ ನಡೆಯಲಿ. ನಿಮ್ಮನ್ನು ಏಕೆ ಬಳಸಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡಿದೆ.

ಬಾಯಿ ತೆರೆಯಲು ನಮಗೆ ಬಲವಂತ ಮಾಡಬೇಡಿ. ಇಲ್ಲದಿದ್ದರೆ .ಡಿ ಬಗ್ಗೆ ತೀಕ್ಷ್ಣ ಟಿಪ್ಪಣಿ ಮಾಡಬೇಕಾಗುತ್ತದೆ. ನನಗೆ ಇದರ ಬಗ್ಗೆ ಮಹಾರಾಷ್ಟ್ರಲ್ಲಿ ಕೆಲವು ಅನುಭವಗಳಾಗಿವೆ. ದೇಶಾದ್ಯಂತ ನೀವು ಇದನ್ನು ಮುಂದುವರೆಸಬಾರದು ಎಂದು .ಡಿ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜು ಅವರಿಗೆ ಮುಖ್ಯ ನ್ಯಾಯಮೂರ್ತಿಗಳು ತಾಕೀತು ಮಾಡಿದರು.

More articles

Latest article