ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನ.9 ಹಾಗೂ 10 ರಂದು ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಪ್ರದೇಶದಲ್ಲಿ ಓಡಾಡಲು ದತ್ತ ಮಾಲಾಧಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಮುಳ್ಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರ ತಾಣಗಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ದತ್ತಮಾಲಾಧಾರಿಗಳು ಶ್ರೀರಾಮಸೇನಾ ಮುಖಂಡರು/ಕಾರ್ಯಕರ್ತರು ಸುತ್ತ ಮುತ್ತಲಿನ ವ್ಯಾಪ್ತಿಯಲ್ಲಿ ಬರುವ ಸ್ಥಳೀಯರು ಹಾಗೂ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡುವವರು ಮತ್ತು ಈಗಾಗಲೇ ಹೋಮ್ ಸ್ಟೇ/ರೆಸಾರ್ಟ್ಗಳನ್ನು ಬುಕ್ಕಿಂಗ್ ಮಾಡಿಕೊಂಡವರುಗಳನ್ನು ಹೊರತು ಪಡಿಸಿ ಇತರೆ ಯಾವುದೇ ಪ್ರವಾಸಿಗರು ಯಾತ್ರಾರ್ಥಿಗಳು ಬರುವುದನ್ನು / ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.