ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್

ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದ್ದಾರೆ. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು (ಶುಕ್ರವಾರ) ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ.

ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಬಿಗಿ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಿದೆ. ವಿಚಾರಣೆ ನಂತರ ಸಂಜೆ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

More articles

Latest article

Most read