ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಸ್ಥಳೀಯ ಬಿಜೆಪಿ ಕಾರ್ಯಕರ್ತೆ ಮಹಿಳೆ ಅತ್ಯಾಚಾರ ಕೇಸ್ ದಾಖಲು ಮಾಡಿದ್ದು, ಎರಡು ವರ್ಷಗಳ ಹಿಂದೆ ನಡೆದಿರುವ ಲೈಂಗಿಕ ದೌರ್ಜನ್ಯ ಮತ್ತು ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ದೂರಿನಲ್ಲಿ ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಸೆಕ್ಷನ್ 2000, ಬಿಎನ್‌ಎಸ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಕೇಸ್ ನಲ್ಲಿ ಸಿಲುಕಿರುವ ಮುನಿರತ್ನ ಜಾಮೀನು ಅರ್ಜಿ ತೀರ್ಪನ್ನು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರಕ್ಕೆ ಕಾಯ್ದಿರಿಸಿದೆ.