ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಇಂದು ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಬಿಜೆಪಿ ಶಾಸಕ ಮುನಿರತ್ನ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.