ಅತ್ಯಾಚಾರ ಕೇಸ್‌ನಲ್ಲಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. 

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಮುನಿರತ್ನ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಅವರನ್ನ ಬಂಧಿಸಲಾಗಿತ್ತು. ಇಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ ಅಳಲು ತೋಡಿಕೊಂಡರು. ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ ಎಂದು ಮುನಿರತ್ನ ಕಣ್ಣೀರಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಡ್ಜ್‌, ನೀವು ಎಲ್ಲಿ ಕೊಡಬೇಕೋ ಅಲ್ಲಿಯೇ ರಾಜೀನಾಮೆ ಕೊಡಿ ಎಂದು ಹೇಳಿದ್ದಾರೆ.

More articles

Latest article

Most read