ಜಾತಿ ನಿಂದನೆ, ಜೀವ ಬೆದರಿಕೆ ಆರೋಪ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರಿನ ಗುತ್ತಿಗೆದಾರರೊಬ್ಬರಿಗೆ ಅವ್ಯಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರುವುದು ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ಮಾಡಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ಆದೇಶಿಸಿದೆ.

ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣ ಸಂಬಂಧ ಬಂಧಿತರಾಗಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಮುನಿರತ್ನ ಅವರನ್ನು ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಮುಂದೆ ವೈಯಾಲಿಕಾವಲ್ ಠಾಣೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ತನಿಖೆಗಾಗಿ ಮುನಿರತ್ನ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಕೋರಿದ್ದರು.

ಆದರೆ, ಮುನಿರತ್ನ ಪರ ವಕೀಲರು ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿ, ಜಾಮೀನು ಅರ್ಜಿ ಕುರಿತು ವಾದ ಮಂಡಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು. ಆದರೆ, ಜಾಮೀನು ಅರ್ಜಿ ವಿಚಾರಣೆ ನಾಲೆಗೆ ಮುಂದೂಡಿಕೆ ಮಾಡಿದ ನ್ಯಾಯಾಲಯ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

More articles

Latest article

Most read