ಕೊ* ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ ಬೆನ್ನಲ್ಲೇ ಪವಿತ್ರ ಗೌಡ ಅರೆಸ್ಟ್!?

ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಇಂದು ಬಂಧಿಸಿದ ಬೆನ್ನಲ್ಲೇ ಪವಿತ್ರಾ ಗೌಡರನ್ನು ಆರ್ ಆರ್ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಎಂಬುವವರ ಕೊಲೆ ಮಾಡಲಾಗಿತ್ತು. ಜೂನ್ 8ರಂದು ಈ ಕೊಲೆ ನಡೆದಿದೆ. ಈ ಕೊಲೆಯನ್ನು ನಟ ದರ್ಶನ್ ಸೂಚನೆ ಮೇರೆಗೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಪವಿತ್ರ ಗೌಡ ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯ ಶೆಡ್‌ಗೆ ರೇಣುಕಾಸ್ವಾಮಿ ಅವರನ್ನು ಕರೆಸಿ ದರ್ಶನ್ ಕೂಡ ರೇಣುಕಾಸ್ವಾಮಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು ಎನ್ನಲಾಗುತ್ತಿದೆ. ಇದೇ ಪ್ರಕರಣದಲ್ಲಿ ಪವಿತ್ರಾ ಗೌಡ ಅವರನ್ನೂ ಬಂಧಿಸಲಾಗಿದೆ.

More articles

Latest article

Most read