ಕೊಲೆ ಪ್ರಕರಣ: ಕೆ.ಆರ್. ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ ಐ ಆರ್

ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಹತ್ತಿರ ಮನೆಯೊಂದರ ಎದುರು ಕಳೆದ ರಾತ್ರಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಿಸಲಾಗಿದೆ. ಜತೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ವಿರುದ್ದವೂ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಕೊಲೆಯಾದ ಶಿವಪ್ರಕಾಶ್ ತಾಯಿ ಇವರ ವಿರುದ್ಧ ದೂರು ನೀಡಿದ್ದರು.

 ಎಫ್‌ ಐ ಆರ್‌ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಭೈರತಿ ಬಸವರಾಜ್ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ.‌ ಯಾರೋ ಸುಮ್ಮನೆ ದೂರು ಕೊಟ್ಟಿದ್ದಾರೆ ಎಂದು ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

More articles

Latest article

Most read