ಮುಸ್ಲಿಂ ಕುಟುಂಬಕ್ಕೆ ಸಮಸ್ಯರಿಗೆ ಬಣ್ಣ ಬಳಿದು ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡದಿದೆ. ಈ ಕೃತ್ಯ ಎಸಗಿದ ವ್ಯಕ್ತಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಮೋಟಾರು ಬೈಕಿನಲ್ಲಿ ಆ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದ ಮುಸ್ಲಿಂ ಕುಟುಂಬದ ಮೇಲೆ ಕೆಲವು ಕಿಡಿಗೇಡಿಗಳು ಬಲವಂತವಾಗಿ ಬಣ್ಣಗಳನ್ನು ಹಚ್ಚಿ ನೀರು ಎರಚಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತಿದ್ದಂತೆ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.ವಿಡಿಯೋದಲ್ಲಿ ಕಿಡಿಗೇಡಿಗಳು “ಜೈ ಶ್ರೀ ರಾಮ್” ಘೋಷಣೆ ಕೂಗುತ್ತಾ ಮುಸ್ಲಿಂ ಕುಟುಂಬವರಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.
ಪೊಲೀಸರ ಪ್ರಕಾರ, ಈ ಘಟನೆಯು ಮಾರ್ಚ್ 20 ರ ಬುಧವಾರದಂದು ನಗರದ ಧಾಂಪುರ್ ಪ್ರದೇಶದಲ್ಲಿ ಸಂಭವಿಸಿದೆ.ಆ ಪ್ರದೇಶದ ಸರ್ಕಲ್ ಆಫೀಸರ್ (ಸಿಒ) ಕುಟುಂಬವನ್ನು ಭೇಟಿಯಾಗಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲು ಸೂಚಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಬಿಜ್ನೋರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ವೈರಲ್ ವೀಡಿಯೊದಲ್ಲಿ, ಮೋಟಾರು ಸೈಕಲ್‌ನಲ್ಲಿ ಹೋಗುತ್ತಿದ್ದ ಕುಟುಂಬಕ್ಕೆ ಕೆಲವು ಪುರುಷರು ಕಿರುಕುಳ ಮತ್ತು ಬಲವಂತವಾಗಿ ಬಣ್ಣ ಹಚ್ಚುತ್ತಿದ್ದಾರೆ.ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಬಿಜ್ಮೋರ್ ಪೊಲೀಸರು ಈ ವ್ಯಕ್ತಿಗಳನ್ನು ಗುರುತಿಸುತ್ತಿದ್ದಾರೆ ಎಂದು ಎಸ್‌ಎಸ್‌ಪಿ ಬಿಜ್ನೋರ್, ನೀರಜ್ ಜಾದುವಾನ್, ಎಕ್ಸ್‌ನಲ್ಲಿನ ತಿಳಿಸಿದ್ದಾರೆ.