ವಕ್ಫ್ ಕಾಯ್ದೆ ವಿರುದ್ಧ ಕೋರ್ಟ್ ಮೊರೆ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆ

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯು ಮುಸ್ಲಿಮರ ಹಕ್ಕನ್ನು ಕಬಳಿಸುವ ಕರಾಳ ಕಾನೂನು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಟೀಕಿಸಿದೆ. ಈ ವಿಧೇಯಕವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಹೇಳಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಡಳಿ ಸದಸ್ಯ ಮೊಹಮ್ಮದ್ ಅದೀಬ್, ಈ ಕಾನೂನಿನ ಮೂಲಕ ಮುಸ್ಲಿಂ ಸಮುದಾಯದ ಆಸ್ತಿಗಳನ್ನು ಕಬಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆಪಾದಿಸಿದರು.
ನಮ್ಮ ಆಸ್ತಿಯನ್ನು ಕಸಿದುಕೊಳ್ಳಬಹುದೆಂದು ಭಾವಿಸಿ ಅವರು ಇದನ್ನು ತಂದಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ನಾವು ಸೋತಿದ್ದೇವೆ ಎಂದು ಭಾವಿಸಬೇಡಿ. ಮಸೂದೆಯ ವಿರುದ್ಧದ ಹೋರಾಟವು ಕೇವಲ ಆರಂಭ ಎಂದು ಅವರು ಗುಡುಗಿದ್ದಾರೆ.

ಆತ್ಮಸಾಕ್ಷಿ ಇರುವ ಎಲ್ಲಾ ನಾಗರಿಕರು ಮಸೂದೆಯನ್ನು ವಿರೋಧಿಸಬೇಕೆಂದು ಮನವಿ ಮಾಡಿಕೊಂಡ ಅದೀಬ್, ಪ್ರಸ್ತಾವಿತ ಶಾಸನವನ್ನು ಕಾನೂನುಬದ್ಧವಾಗಿ ಮತ್ತು ಸಾರ್ವಜನಿಕ ಪ್ರತಿಭಟನೆ ಮೂಲಕ ವಿರೋಧಿಸಲಿದ್ದೇವೆ. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ. ಈ ಕಾನೂನನ್ನು ಹಿಂತೆಗೆದುಕೊಳ್ಳುವವರೆಗೆ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

More articles

Latest article

Most read