ಸಂವಿಧಾನ ದ್ವೇಷಿಯಾಗಿರುವ ಸಂಘ ಪರಿವಾರ, ಬಿಜೆಪಿಯನ್ನು ಹಿಮ್ಮೆಟ್ಟಿಸೋಣ: ಸಿಎಂ ಸಿದ್ದರಾಮಯ್ಯ ಕರೆ

Most read

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

BJP ಪರಿವಾರ ಭಾರತದಲ್ಲಿ ಬಹಳ  ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್  ನಮಗೆ ಮಾರ್ಗದರ್ಶಕರು ಎಂದರು. ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರ ಮತ್ತು ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದು ಹೇಳಿದರು.

BJP ಪರಿವಾರ, ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ. ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ.  ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು ಎಂದರು.

ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ತಿಳಿಸಿದರು.

More articles

Latest article