ತಂದೆ ಸತೀಶ ಜಾರಕಿಹೊಳಿಯವರೇ ನನಗೆ ಆದರ್ಶ: ಯುವನಾಯಕಿ ಪ್ರಿಯಂಕಾ

Most read

ಬೆಳಗಾವಿ: ರಾಜಕಾರಣದ ಮೂಲಕ ಸಮಾಜ ಸೇವೆ ಮಾಡುವುದರ ಜೊತೆಗೆ ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಬಯಸುವ ಯುವಕರಿಗೆ ತಮ್ಮ ಫೌಂಡೇಷನ್ ಮೂಲಕ ಸಹಾಯ ಸಹಕಾರ ನೀಡುವ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರು ನನಗೆ ಆದರ್ಶ. ಅವರ ದಾರಿಯಲ್ಲೇ ನಡೆದು ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನಿಮ್ಮ ಮನೆಯ ಮಗಳಾದ ನನಗೂ ಸಹ ನಮ್ಮ ತಂದೆಯವರಿಗೆ ನೀಡಿದ ಬೆಂಬಲ, ಅಭಿಮಾನವನ್ನು ನೀಡಿ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.

ಹುಕ್ಕೇರಿ ವಿಧಾನಸಭಾ ಕ್ಷೇತ್ರದ ರುಸ್ತುಂಪುರ ಗ್ರಾಮದಲ್ಲಿ ಲೋಕಸಭಾ ಚುನಾವಣಾ ಪ್ರಚಾರಾರ್ಥವಾಗಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಅವರು ಮಾತನಾಡಿದರು.

ಕಳೆದ 15 ವರ್ಷದಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ತಂದೆ ಸತೀಶ ಜಾರಕಿಹೊಳಿ ಅವರು ತಮ್ಮ ಮತಕ್ಷೇತ್ರದ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶಾಲಾ ಕಾಲೇಜುಗಳನ್ನು ನಿರ್ಮಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ನನಗೂ ಇದೇ ರೀತಿಯಲ್ಲಿ ಜನರ ಸೇವೆ ಮಾಡುವ ಬಯಕೆಯಿದೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಸ್ವಚ್ಛ ಆಡಳಿತ ನೀಡಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು ಕಾಂಗ್ರೆಸ್ ಪಕ್ಷದವರು. ಹೀಗಾಗಿ ದೇಶದ ಅಭಿವೃದ್ಧಿಗೆ ನಿಜವಾಗಿ ಶ್ರಮಿಸಿದವರು ಕಾಂಗ್ರೆಸ್ ಪಕ್ಷದವರು. ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಶ್ರಮಿಸುವ ಮೂಲಕ ಕಾಂಗ್ರೆಸ್ ಕೈ ಬಲಪಡಿಸಬೇಕು. ಇದಕ್ಕಾಗಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಡಬೇಕು ಎಂದು ಸಭಿಕರಲ್ಲಿ ಕೋರಿದರು

ಇದೇ ಸಂದರ್ಭದಲ್ಲಿ ಯುವನಾಯಕಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗ್ರಾಮದ ಮಹಿಳೆಯರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಿವಾನಂದ ಗುಡಗನಟ್ಟಿ, ಶಿವಪ್ಪ ಈರನಟ್ಟಿ, ಯಲ್ಲಪ್ಪ ನಾಯ್ಕ, ಶ್ರೀಶೈಲ್ ದೊಡಮನಿ, ಗ್ರಾಪಂ ಅಧ್ಯಕ್ಷ ಶಿವಲಿಂಗಪ್ಪ ಹೆಬ್ಬಾಳ, ಗ್ರಾಪಂ ಉಪಾಧ್ಯಕ್ಷ ಲಗಮವ್ವಾ ಸಾವಿನಾಯ್ಕ, ಗ್ರಾಪಂ ಸದಸ್ಯ ಅಡಿವೆಪ್ಪ ಬಡನಾಯ್ಕ, ಸತ್ತೆಪ್ಪ ಲಠ್ಠೆ, ಚಂದ್ರಪ್ಪ ಹೆಬ್ಬಾಳ, ಈಶ್ವರ ಮುನ್ನೋ ಳಿ, ವೀರಭದ್ರ ಮನಗುತ್ತಿ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

More articles

Latest article