Saturday, July 27, 2024

ಕೇಂದ್ರ ಸರ್ಕಾರದ ವಿರುದ್ಧ‌ #ನನ್ನತೆರಿಗೆನನ್ನಹಕ್ಕು ಟ್ವಿಟರ್‌ ಅಭಿಯಾನಕ್ಕೆ ಸಾತ್‌ ನೀಡಿದ್ದ ಸಿದ್ದರಾಮಯ್ಯ

Most read

ಕಳೆದ ವಾರ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ನಲ್ಲಿ ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕ್ಕೆ ಕೊಡಬೇಕಾದ ಪಾಲು ಬಂದಿಲ್ಲ ಎಂದು ಕನ್ನಡಿಗರು ಕೇಂದ್ರ ಸರ್ಕಾರದ ವಿರದ್ಧ #ನನ್ನತೆರಿಗೆನನ್ನಹಕ್ಕು ಮತ್ತು #SouthTaxMovement ಎಂಬ ಹ್ಯಾಷ್‌ ಟ್ಯಾಗ್ ಟ್ವಿಟರ್‌ ಅಭಿಯಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಬಲ ಸೂಚಿಸಿದ್ದಾರೆ.

ಭಾನುವಾರ ಸಂಜೆ ನಡೆದ ಟ್ವಿಟರ್‌ ಅಭಿಯಾನದಲ್ಲಿ ರಾಜ್ಯದ ಜನತೆ ಕೇಂದ್ರ ಸರ್ಕಾರದ ವಿರುದ್ದ ಸರಣಿ ಟ್ವೀಟ್‌ ಮಾಡಿದ್ದರು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದು. ʼತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಎಂದಿದ್ದಾರೆ.

ಮುಂದುವರೆದು, ʼಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು ಎಂದು ಟೀಕಿಸಿದರು.

ʼಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್. ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದರು.

More articles

Latest article