ಚನ್ನಪಟ್ಟಣ ಉಪಚುನಾವಣೆಯಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ. ಸಿ. ಎನ್. ಮಂಜುನಾಥ್ ಸ್ಪಷ್ಟನೆ

ಚನ್ನಪಟ್ಟಣ ಉಪ ಚುನಾವಣೆಗೆ ನನ್ನ ಪತ್ನಿ ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಅವರು ಸ್ಪರ್ಧಿಸಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಪತ್ನಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ಅನುಸೂಯ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ. ಅನುಸೂಯ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ್ ಅವರು ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ. ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು, ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿಯನ್ನು ಕಣಕ್ಕಿಳಿಸಲಿವೆ ಎಂದು ಚರ್ಚೆಯಾಗುತ್ತಿತ್ತು. ಇದಕ್ಕೆ ಡಾ.ಮಂಜುನಾಥ್ ಅವರು ಸ್ಪಷ್ಟನೆ ನೀಡಿದ್ದಾರೆ.

More articles

Latest article

Most read