ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರಿಗೆ ಆಹ್ವಾನ ನೀಡಿದ ಮೈಸೂರು ಜಿಲ್ಲಾಡಳಿತ

Most read

ಹಾಸ‌ನ: ನಾಡಹಬ್ಬ ದಸರಾ  ಉದ್ಘಾಟಿಸಲು ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ನಗರದ ಅವರನ್ನು ಮೈಸೂರು ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಿದೆ. ಇಲ್ಲಿನ ಅವರ ನಿವಾಸದಲ್ಲಿ ಆದ ಮೈಸೂರು ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿಯೂ ಅಗಿರುವ ಲಕ್ಷ್ಮಿಕಾಂತ್ ರೆಡ್ಡಿ ಅವರು ದಸರಾ ಉತ್ಸವದ ಆಹ್ವಾನ ಪತ್ರಿಕೆ ನೀಡಿ ಆತ್ಮೀಯವಾಗಿ ಆಹ್ವಾನಿಸಿದರು.

ಇದೇ ಸಂದರ್ಭದಲ್ಲಿ ಬಾನು ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಲಾಯಿತು.

ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ನಾಡಿನ ಸಮಸ್ತ ಕನ್ನಡಿಗರು,, ಸಿದ್ದರಾಮಯ್ಯ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಮೈಸೂರು ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ದಸರಾ ಉದ್ಘಾಟನೆಗೂ  ಮೊದಲು ವಿದೇಶ ಪ್ರವಾಸ ನಿಗದಿಯಾಗಿದೆ.  ಸೆಪ್ಟಂಬರ್‌ 22ಕ್ಕೂ ಮುನ್ನ ಮೈಸೂರಿಗೆ ತೆರಳುವ ಉದ್ದೇಶ ಇಲ್ಲ ಎಂದರು.

ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್‌ ರೆಡ್ಡಿ ಮಾತನಾಡಿ, ಮುಖ್ಯಮಂತ್ರಿಗಳ ಸೂಚನೆಯಂತೆ ಸ್ವಾಗತ ಸಮಿತಿ ಸದಸ್ಯರೊಂದಿಗೆ ಆಗಮಿಸಿ ಬಾನು ಅವರನ್ನು ಆಹ್ವಾನಿಸಲಾಗಿದೆ. ಅವರು ದಸರಾ ಉದ್ಘಾಟಿಸಲು ಸಂತೋಷದಿಂದ  ಒಪ್ಪಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವರಾಜ್, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ತನ್ವಿರ್ ಆಸಿಫ್‌, ಹಾಜರಿದ್ದರು.

More articles

Latest article