Friday, December 6, 2024

ಹ್ಯಾರಿಸ್ ವಿರುದ್ಧ ಚುನಾವಣಾ ತಕರಾರು ಅರ್ಜಿ; ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ

Most read

ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ವೇಳೆ ಎನ್.ಎ. ಹ್ಯಾರಿಸ್ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅವರನ್ನು ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಪರಾಜಿತ ಅಭ್ಯರ್ಥಿ ಶಿವಕುಮಾರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಕುರಿತು ಚುನಾವಣಾ ತಕರಾರು ಅರ್ಜಿಯನ್ನು ಸೋಮವಾರ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಮಾಡಲಾಗಿದೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರು ನಿನ್ನೆ ಬೆಳಗ್ಗೆಯಷ್ಟೇ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ ಈಗ ಅವರ ಶಾಸಕ ಸ್ಥಾನವೇ ಅನರ್ಹಗೊಳ್ಳುವ ಭೀತಿ ಶುರುವಾಗಿದೆ.

More articles

Latest article