ವಾಲ್ಮೀಕಿ ಬುಡಕಟ್ಟು ಜನಾಂಗ ಅಭಿವೃದ್ಧಿ ನಿಗಮ ಹಗರಣದ ಆರೋಪದಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಬುಧವಾರ ಬೆಳಗ್ಗೆ ದಾಳಿ ನಡೆಸಿದೆ.
ಬಳ್ಳಾರಿಯ ನೆಹರೂ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸ, ಬೆಂಗಳೂರಿನ ಡಾಲರ್ಸ್ ಕಾಲೋನಿಯ ಅಪಾರ್ಟ್ ಮೆಂಟ್ ಒಂದರಲ್ಲಿರುವ ನಾಗೇಂದ್ರ ಅವರ ಫ್ಲ್ಯಾಟ್ ಮೇಲೆ ಬೆಳ್ಳಂಬೆಳಗ್ಗೆಯೇ ಆಗಮಿಸಿದ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದೇವೇಳೆ ವಾಲ್ಮೀಕಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಅವರಿಗೆ ಸೇರಿದ ಬೆಂಗಳೂರು ನಿವಾಸ ಮತ್ತು ರಾಯಚೂರಿನ ನಿವಾಸದ ಮೇಲೂ ಇ.ಡಿ. ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನೂರು ಕೋಟಿ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಜಾರಿ ನಿರ್ದೇಶನಾಲಯ ED ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದೆ.