ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಪಡೆದಿದ್ದಾರೆ.
ಇಡಿ ಅಧಿಕಾರಿಗಳು ನಾಗೇಂದ್ರ ವಿರುದ್ಧ ಚಾರ್ಜ್‌ಶೀಟ್ ಕೂಡ ಸಿದ್ಧಪಡಿಸಿದ್ದರು. ಇದರಲ್ಲಿ ನಾಗೇಂದ್ರ ಅವರೇ ಆರೋಪಿ ಎಂಬುದಕ್ಕೆ ಹಲವು ಸಾಕ್ಷಿಗಳನ್ನು ಸಹ ಒದಗಿಸಿದ್ದರು. ಇದರ ನಡುವೆಯೇ ಬಿ.ನಾಗೇಂದ್ರ ಅವರಿಗೆ ಕೋರ್ಟ್‌ನಲ್ಲಿ ರಿಲೀಫ್ ಸಿಕ್ಕಿದೆ.
ಈ ಕುರಿತು ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಅವರು, ಸಿದ್ದರಾಮಯ್ಯ ಹೆಸರು ಹೇಳುವಂತೆ ಇಡಿ ಕಿರುಕುಳ ನೀಡಿದ್ದಾರೆ. ವಿನಾಕಾರಣ ಸರ್ಕಾರವನ್ನು ಸಿಲುಕಿಸುವ ಕೆಲಸದಲ್ಲಿ ಇವರು ತೊಡಗಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ಸಿಎಂ ಸಿದ್ದರಾಮಯ್ಯನವರ ಪಾತ್ರ ಹೇಗೆ ಬರುತ್ತೆ. ಮುಂದಿನ ದಿನದಲ್ಲಿ ಕಾನೂನು ಹೋರಾಟ ಮಾಡ್ತೇವೆ. ನ್ಯಾಯಾಲಯಕ್ಕೆ ನಾನು ಧನ್ಯವಾದ ಹೇಳ್ತೇನೆ. ಸಚಿವ ಸ್ಥಾನ ನೀಡೋದು ಹೈಕಮಾಂಡ್ ತೀರ್ಮಾನ ಎಂದು ಬಿ.ನಾಗೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.