ಬೆಂಗಳೂರು: 2024ರ ಕೊನೆಯ ದಿನವಾದ ನಿನ್ನೆ ಮಂಗಳವಾರ ಬಿಎಂಆರ್ ಸಿಎಲ್ ನಮ್ಮ ಮೆಟ್ರೋ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಗಳಿಸಿದೆ. ಮೆಟ್ರೋ ರೈಲು ಸೇವೆಯನ್ನು ತಡರಾತ್ರಿ ಎರಡು ಗಂಟೆವರೆಗೂ ವಿಸ್ತರಿಸಲಾಗಿತ್ತು. ಬೆಂಗಳೂರಿನ ವಿವಿಧ ಭಾಗಗಳಿಂದ ವಿವಿಧ ಪ್ರದೇಶಗಳಿಗೆ ಆಗಮಿಸಲು ಮತ್ತು ಮರಳಲು ಸಾರ್ವಜನಿಕರು ಮೆಟ್ರೋ ಆಯ್ಕೆ ಸಂಚಾರವನ್ನು ಆಯ್ಕೆ ಮಾಡಿಕೊಂಡಿದ್ದರು.
ಹೊಸ ವರ್ಷದ ಅಂಗವಾಗಿ ನಿನ್ನೆ ಬೆಳಗ್ಗೆ 5 ರಿಂದ ತಡರಾತ್ರಿ 2.45 ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಿವೆ. ಪಿಂಕ್ ಲೈನ್ನಲ್ಲಿ ಒಟ್ಟು 4,00,583, ಗ್ರೀನ್ ಲೈನ್ನಲ್ಲಿ 2,90,530, ಪಿಂಕ್ ಮತ್ತು ಗ್ರೀನ್ ಮಾರ್ಗದಿಂದ ಒಟ್ಟು 8,59,467 ಪ್ರಯಾಣಕರು ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸಿದ್ದಾರೆ. ಪಿಂಕ್ ಮತ್ತು ಗ್ರೀನ್ ಮಾರ್ಗದಿಂದ ಪೇಪರ್ ಟಿಕೆಟ್ ಮೂಲಕ 5,423 ಮತ್ತು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ 1,62,931 ಜನರು ಪ್ರಯಾಣ ಮಾಡಿದ್ದಾರೆ. ಈ ಎಲ್ಲ ಅನುಕೂಲಗಳನ್ನು ಕಲ್ಪಿಸಿದ್ದರಿಂದ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಹರಿದುಬಂದಿದೆ.
ಎಂ.ಜಿ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗಿರುವುದರಿಂದ ಡಿಸೆಂಬರ್ 31, 2024 ರಂದು ರಾತ್ರಿ 11 ಗಂಟೆಯಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗಿತ್ತು. ಪ್ರಯಾಣಿಕರಿಗೆ ಸಮೀಪದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ಮೆಟ್ರೋ ರೈಲು ಹತ್ತಲು ಅವಕಾಶ ನೀಡಲಾಗಿತ್ತು. ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 11 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು ರೂ. 50 ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಅನ್ನು ವಿತರಿಸಲಾಗಿತ್ತು. ಈ ಕಾಗದದ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 31ನೇ ಡಿಸೆಂಬರ್ 2024ರ ಬೆಳಗ್ಗೆ 8ಗಂಟಟೆಯಿಂದಲೇ ಮುಂಗಡವಾಗಿ ಖರೀದಿಸಲು ಅವಕಾಶ ಇತ್ತು. ಸಾಮಾನ್ಯ QR ಕೋಡ್ ಟಿಕೆಟ್ಗಳು ಮತ್ತು ಮಾಸಿಕ ಕಾರ್ಡ್‌ಗಳ ಮೂಲಕವೂ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು.