ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ ಪ್ರಚಾರ ಮಂತ್ರಿ: ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಅವರು ಪ್ರಚಾರ ಮಂತ್ರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಈವೆಂಟ್ ಮ್ಯಾನೇಜ್ಮೆಂಟ್ ನಲ್ಲಿ ಪರಿಣಿತರಾಗಿದ್ದಾರೆ. ದೇಶದ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ, ಅದರ ಬಗ್ಗೆ ಪ್ರಧಾನಿ ಮೋದಿಯವರು ಮಾತನಾಡಬೇಕು. ನಿರುದ್ಯೋಗ ಈ ಚುನಾವಣೆಯ ದೊಡ್ಡ ವಿಷಯ ಎಂದು ಹೇಳಿದರು.

ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ ಎಂದ ಅವರುಮಾಲೀಕಯ್ಯ ಗುತ್ತೇದಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಳೆಯ ಸ್ನೇಹಿತರು. ಡಿಕೆಶಿಗೆ ಸ್ನೇಹಿತರಾಗಿರುವ ಹಿನ್ನೆಲೆಯಲ್ಲಿ ಅವರು ಭೇಟಿ ಮಾಡಿದ್ದಾರೆ ಎಂದು ಖರ್ಗೆ ಹೇಳಿದರು.

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಬದಲಾವಣೆಯಾಗಲಿ, ಒಳ್ಳೆಯದು. ಬಹುಶಃ ಜೆಡಿಎಸ್, ಬಿಜೆಪಿ ಜತೆ ವಿಲೀನವಾಗಬಹುದು ಎಂದರು. ಮುಖ್ಯಮಂತ್ರಿ ಆಗಲು ಇಷ್ಟೆಲ್ಲ ಮಾಡುತ್ತಿದ್ದರೆ ಯಾರೇನು ಮಾಡಲು ಸಾಧ್ಯ ಎಂದು ಅವರು ನುಡಿದರು.

More articles

Latest article

Most read