ಏಪ್ರಿಲ್ 14 ರಂದು ರಾಜ್ಯಕ್ಕೆ ನರೇಂದ್ರ ಮೋದಿ: ಬೆಂಗಳೂರಿನಲ್ಲಿ ಸಭೆ, ಮಂಗಳೂರಿನಲ್ಲಿ ಸಮಾವೇಶ

Most read

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಏ.14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರಿನಲ್ಲಿ ಬೆಳಿಗ್ಗೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿರುವ ನರೇಂದ್ರ ಮೋದಿ, ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬೃಹತ್‌ ಸಮಾವೇಶವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಂಗಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ಮೋದಿ ಪ್ರಚಾರ ಸಭೆಯನ್ನು ಏರ್ಪಡಿಸಲಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಸಂಯೋಜಕ ಸುನೀಲ್‌ ಕುಮಾರ್‌ ಹೇಳಿದ್ದಾರೆ.

More articles

Latest article