ನ್ಯಾಷನಲ್‌ ಹೆರಾಲ್ಡ್‌  ಪ್ರಕರಣ: ಸೋನಿಯಾ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್:‌ ಚಾರ್ಜ್‌ ಶೀಟ್‌ ಪರಿಗಣಿಸದಿರಲು ಕೋರ್ಟ್‌ ನಿರ್ಧಾರ

Most read

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌  ಪ್ರಕರಣದಲ್ಲಿ ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅವರಿಗೆ ತುಸು ನೆಮ್ಮದಿ ಮೂಡಿಸುವ ಆದೇಶ ಪ್ರಕಟವಾಗಿದೆ. ನ್ಯಾಷನಲ್‌ ಹೆರಾಲ್ಡ್‌  ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌ ಎ) ಕುರಿತು ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಪರಿಗಣಿಸುವುದಿಲ್ಲ ಎಂದು ದೆಹಲಿಯ ವಿಶೇಷ ನ್ಯಾಯಾಲಯ ಹೇಳಿದೆ.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ಅಕ್ಟೋಬರ್‌ 3ರಂದು  ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಸೇರಿದಂತೆ ಏಳು ಮಂದಿಯ ವಿರುದ್ಧ ಎಫ್‌ ಐಆರ್‌ ದಾಖಲಿಸಿತ್ತು. ಈ ಸಂಬಂಧ ತೀರ್ಪು ನೀಡಿರುವ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ಎಲ್ಲ ಸೋನಿಯಾ, ರಾಹುಲ್‌ ಗಾಂಧಿ ಸೇರಿದಂತೆ ಎಲ್ಲ ಏಳು ಆರೋಪಿಗಳು ಎಫ್‌ ಐಆರ್‌ ಪ್ರತಿ ಪಡೆಯಲು ಅರ್ಹರಲ್ಲ ಎಂದು ಹೇಳಿದ್ದಾರೆ.

ತನಿಖೆಯನ್ನು ಮುಂದುವರೆಸಲು ಯಾವುದೇ ಅಡ್ಡಿ ಇಲ್ಲ ಎಂದೂ ಸ್ಪಷ್ಟಪಡಿಸಿರುವ ನ್ಯಾಯಾಲಯವು ಈ ಪ್ರಕೃಣವು ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿರುವ ಖಾಸಗಿ ದೂರನ್ನು ಆಧರಿಸಿದೆಯೇ ಹೊರತು ಯಾವುದೇ ಎಫ್‌ ಐಆರ್‌ ಅನ್ನು ಆಧರಿಸಿಲ್ಲ. ಆದ್ದರಿಂದ ಈ ಹಂತದಲ್ಲಿ ವಿಚಾರಣೆಗೆ ಪರಿಗಣಿಸುವುದಿಲ್ಲ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಷ್ಟೇ ಅಲ್ಲದೆ , ಸುಮನ್ ದುಬೆ, ಸ್ಯಾಮ್ ಪಿಟ್ರೋಡಾ, ಯಂಗ್ ಇಂಡಿಯನ್, ಡೋಟೆಕ್ಸ್ ಮರ್ಚಂಡೈಸ್ ಮತ್ತು ಸುನೀಲ್ ಭಂಡಾರಿ ಅವರನ್ನೂ ಜಾರಿ ನಿರ್ದೇಶನಾಲಯ ಆರೋಪಿಗಳನ್ನಾಗಿ ಹೆಸರಿಸಿತ್ತು. ಆದರೆ, ನ್ಯಾಯಾಲಯದ ಇಂದಿನ ಆದೇಶವು ಈ ಎಲ್ಲ ಆರೋಪಿಗಳಿಗೆ ರಿಲೀಫ್ ನೀಡಿದೆ.

More articles

Latest article