ಅಕ್ರಮ ಹಣ ವರ್ಗಾವಣೆ ಕೇಸ್‌ ಬೆನ್ನಲ್ಲೇ ರಾಷ್ಟ್ರೀಕೃತ ಬ್ಯಾಂಕ್‌ಗಳ ಸರ್ಕಾರಿ ಖಾತೆಗಳನ್ನು ಬಂದ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

Most read

ಬ್ಯಾಂಕ್​​ಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಕಾರಣ ಎರಡು ರಾಷ್ಟ್ರೀಕೃತ ಬ್ಯಾಂಕ್​​ಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್​ಗಳ ಎಲ್ಲ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರ್ಕಾರಕ್ಕೆ ಸಂಬಂಧಿಸಿ ಈ ಬ್ಯಾಂಕ್​ಗಳ ಎಲ್ಲಾ ಶಾಖೆ​​ಗಳಿಂದ ಠೇವಣಿ ಹಿಂಪಡೆಯಬೇಕು. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮ ಮಂಡಳಿ, ಸ್ಥಳೀಯ ಸಂಸ್ಥೆ, ವಿವಿ ಮತ್ತಿತರ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ. ಎಲ್ಲಾ ರೀತಿಯ ಠೇವಣಿ, ಹೂಡಿಕೆ ತಕ್ಷಣ ಹಿಂಪಡೆಯಬೇಕು. ಇಷ್ಟೇ ಅಲ್ಲದೆ, ಇನ್ನು ಮುಂದೆ ಈ ಬ್ಯಾಂಕ್​ಗಳಲ್ಲಿ ಹೂಡಿಕೆ ಮಾಡಬಾರದು ಎಂದು ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ. ಪಿಸಿ ಜಾಫರ್ ಮಹತ್ವದ ಆದೇಶ ಹೊರಡಿಸಿದ್ದಾರೆ.

ಇಲಾಖೆಗಳ ಖಾತೆ ಸ್ಥಗಿತಗೊಳಿಸಿ​ ಆ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಸೆಪ್ಟೆಂಬರ್​​ 20ರೊಳಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಜಾಫರ್ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

More articles

Latest article