ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ 59ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರಿಗೆ ಪದವಿ ಪ್ರದಾನ ಮಾಡಲಾಯಿತು.
ನಾಜಿಯಾ ಅವರ ಸಂಶೋಧನೆಯು “ವಕ್ಸ್ ಬೋರ್ಡ್ ಕಾರ್ಯಕ್ರಮಗಳ ಪರಿಣಾಮಕಾರಿ ಪರಿಣಾಮಗಳಲ್ಲಿ ಸಾರ್ವಜನಿಕ ಸಂಪರ್ಕಗಳ ಪಾತ್ರ ಮತ್ತು ಕಾರ್ಯಗಳು: ಒಂದು ಪ್ರಕರಣದ ಅಧ್ಯಯನ.” ಕುರಿತು ಸುದೀರ್ಘ ಅಧ್ಯಯನ ಮಾಡಿ thesis ಬರೆದಿದ್ದರು. ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಡಾಕ್ಟರೇಟ್ ಪ್ರದಾನ ಮಾಡಿದರು.
ಬೆಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮಾಜಿ ಮುಖ್ಯಸ್ಥ ಪ್ರೊ.ಜಗದೀಶ್ ಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಅವರ ಕೆಲಸ ಪೂರ್ಣಗೊಂಡಿತು.