2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದ ನೀರಜ್ ಚೋಪ್ರಾಗೆ ಈ ವರ್ಷ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಲಭಿಸಿದೆ.
ಪಾಕಿಸ್ತಾನದ ಅರ್ಶದ್ ನದೀಮ್ ತಮ್ಮ ಎರಡನೇ ಪ್ರಯತ್ನದಲ್ಲಿ 92.97 ಮೀಟರ್ ದೂರ ಜಾವೆಲಿನ್ ಎಸೆದು ಇತಿಹಾಸ ನಿರ್ಮಿಸಿದಲ್ಲದೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ನೀರಜ್ ಚೋಪ್ರಾ ಅವರು ತಮ್ಮ ಎರಡನೇ ಪ್ರಯತ್ನದಲ್ಲಿ 89.45 ಮೀಟರ್ ದೂರ ಎಸೆದು ಎರಡನೇ ಸ್ಥಾನ ಅಲಂಕರಿಸುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಮುಖ್ಯ ವಿಷಯವೇನೆಂದರೆ, ನೀರಜ್ ಚೋಪ್ರಾ ಎರಡನೇ ಪ್ರಯತ್ನ ಬಿಟ್ಟು ಮಿಕ್ಕ ನಾಲ್ಕು ಪ್ರಯತ್ನದಲ್ಲಿ ಫಾಲ್ ಆಗಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ.