ಮೇ 4 ರಂದು ನೀಟ್‌ ಪರೀಕ್ಷೆ: ವಿದ್ಯಾರ್ಥಿಗಳೇ ನಿಮ್ಮ ತಯಾರಿ ಹೀಗಿರಲಿ

Most read

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ದಾಖಲಾಗಬಯಸುವವರಿಗೆ ನೀಟ್‌ ಪರೀಕ್ಷೆ 2025ರ ಮೇ 4, ಭಾನುವಾರ ನಿಗದಿಯಾಗಿದೆ. ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆ ಮುಗಿದು ಫಲಿತಾಂಶವೂ ಪ್ರಕಟವಾಗಿದೆ. ವೃತ್ತಿಪರ ಕೋರ್ಸ್‌ಗಳಿಗೆ ಸೇರಬಯಸುವವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿಸಿಇಟಿ 2025 ಪರೀಕ್ಷೆಯನ್ನು ಬರೆದಿದ್ದಾರೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ ದಾಖಲಾಗುವವವರು ನೀಟ್‌ ಪರೀಕ್ಷೆ (NEET UG 2025)ಗೆ ಹಾಜರಾಗಬೇಕಿದೆ.

ವಿದ್ಯಾರ್ಥಿಗಳಿಗೆ ಸೂಚನೆಗಳು:
2025 ರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಎದುರಿಸುತ್ತಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ ಸೈಟ್‌ನಿಂದ ಪ್ರವೇಶ ಪತ್ರವನ್ನು ಡೌನ್‌ ಲೋಡ್ ಮಾಡಿಕೊಳ್ಳಬೇಕು. ಪ್ರವೇಶ ಪತ್ರವಿಲ್ಲದೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ.
ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಅಭ್ಯರ್ಥಿಗಳು ಮಧ್ಯಾಹ್ನ 1.30 ರೊಳಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸೂಚಿಸಲಾಗಿದೆ. ಪರೀಕ್ಷೆಯು ಆಫ್‌ ಲೈನ್‌ ನಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸಲು ನೀಲಿ ಅಥವಾ ಕಪ್ಪು ಪೆನ್ನು ಬಳಸಬೇಕಾಗಿರುತ್ತದೆ.

ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಇರುವ ಏಕೈಕ ಪ್ರವೇಶ ಪರೀಕ್ಷೆ ಇದಾಗಿದೆ.
ನೀಟ್‌ ಪರೀಕ್ಷೆಯು ನಾಲ್ಕು ವಿಷಯಗಳಿಗೆ ನಡೆಯಲಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ. ಇದು 180 ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿದೆ. ಪ್ರತಿ ಪ್ರಶ್ನೆಗೆ ನಾಲ್ಕು ಆಯ್ಕೆಗಳಿರುತ್ತವೆ. ವಿದ್ಯಾರ್ಥಿಗಳು ಪ್ರತಿ ಸರಿಯಾದ ಉತ್ತರಕ್ಕೆ +4 ಅಂಕಗಳನ್ನು ಪಡೆಯುತ್ತಾರೆ. ಆದರೆ ತಪ್ಪು ಉತ್ತರಕ್ಕೆ ಒಂದು ಅಂಕವನ್ನು ಕಡಿತಗೊಳಿಸಲಾಗುತ್ತದೆ. ಉತ್ತರಿಸದೆ ಉಳಿದಿರುವ ಪ್ರಶ್ನೆಗಳಿಗೆ ಶೂನ್ಯ ಅಂಕಗಳನ್ನು ನೀಡಲಾಗುತ್ತದೆ. ಪರೀಕ್ಷಾ ಪಠ್ಯಕ್ರಮವು 11 ಮತ್ತು 12 ನೇ ತರಗತಿಗಳನ್ನು ಆಧರಿಸಿರುತ್ತದೆ.

More articles

Latest article