ನೇಪಾಳ: ನೇಪಾಳದ ಪೋಖರಾಗೆ ತೆರಳುತ್ತಿದ್ದ ಬಸ್ ವೊಂದು ಡಾಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ 25 ಭಾರತೀಯ ಪ್ರವಾಸಿಗರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಉತ್ತರ ಪ್ರದೇಶದ ಡಾಂಗ್‌ನ ತುಳಸಿಪುರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ 19 ಪ್ರವಾಸಿಗರನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ನೇಪಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಅಪಘಾತ ನಡೆದಿದ್ದು, ಬಸ್ ನ ಬ್ರೇಕ್ ವೈಫಲ್ಯದಿಂದ ಸಂಭವಿಸಿದೆ ಎಂದು ಭಾವಿಸಲಾಗಿದೆ. ಗಾಯಾಳುಗಳಲ್ಲಿ ಹೆಚ್ಚಿನವರು ಉತ್ತರ ಪ್ರದೇಶದ ಲಖನೌ, ಸೀತಾಪುರ, ಹರ್ದೋಯಿ ಮತ್ತು ಬಾರಾಬಂಕಿ ಜಿಲ್ಲೆಗೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.
ನೇಪಾಳದ ಗಧಾವಾದ ಪೊಲೀಸರು ಸ್ಥಳಕ್ಕೆ ತೆರಳಿ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 19 ಮಂದಿಯನ್ನು ತುಳಸಿಪುರದ ಆಸ್ಪತ್ರೆಗೆ ಕಳುಹಿಸಲಾಗಿದೆ.
ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ 19 ಭಾರತೀಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಲ್ಲಿ ಕೆಲವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಅವರಿಗೆ ನೇಪಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತುಳಸಿಪುರದ ವೃತ್ತ ಅಧಿಕಾರಿ ಬ್ರಿಜನಂದನ್ ರೈ ಖಚಿತ ಪಡಿಸಿದ್ದಾರೆ.