Sunday, September 8, 2024

ಒಂದು ದೇಶ, ಒಂದು ಚುನಾವಣೆ ಮತ್ತು ನೀಟ್‌ ಪರೀಕ್ಷೆ ರದ್ದು ಕೋರಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

Most read

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಹಗರಣ ಮತ್ತು ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರುದ್ಧ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆ ರದ್ದು ಹಾಗೂ ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು, ವಿಧಾನಸಭೆ ವಿಧಾನ ಪರಿಷತ್‌ ಅದನ್ನು ಅಂಗೀಕರಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜುಲೈ 22ರಂದು ನಡೆದ ನಡೆದ ಸಂಪುಟ ಸಭೆಯಲ್ಲಿ ನೀಟ್‌ ಪರೀಕ್ಷೆ ಮತ್ತು ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ವಿರೋಧಿಸಲು ನಿರ್ಧರಿಸಲಾಗಿತ್ತು. 

ನಿರ್ಣಯ ಮಂಡಿಸಿದ ಕಾನೂನು ಸಚಿವ ಹೆಚ್.ಕೆ  ಪಾಟೀಲ್,  ಕೇಂದ್ರ ಸರ್ಕಾರದ ‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆ ಮತ್ತು ಜನಸಂಖ್ಯೆ ಆಧಾರದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಮರು ವಿಂಗಡನೆ ಪ್ರಕ್ರಿಯೆಯನ್ನೂ ವಿರೋಧಿಸಿ ರಾಜ್ಯ ಸರ್ಕಾರ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದ್ದು ಇದನ್ನು ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ.

ನೀಟ್‌ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುವುದು ಮಾತ್ರವಲ್ಲದೆ ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಹೀಗಾಗಿ  ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ NTA ನಡೆಸುವ ನೀಟ್‌ ಪರೀಕ್ಷೆಯನ್ನು ವಿರೋಧಿಸಿ, ವಿಧಾನ ಮಂಡಲ ಉಭಯ ಅಧಿವೇಶನದಲ್ಲಿ ರಾಜ್ಯ ಸರ್ಕಾರ ನಿರ್ಣಯ ಕೈಗೊಂಡಿದ್ದು ಇದನ್ನು ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ.

More articles

Latest article