ನೇತ್ರಾವತಿ ನದಿಯಲ್ಲಿ‌ ಮುಳುಗಿ ಇಬ್ಬರು ಅಪ್ರಾಪ್ತ ಬಾಲಕಿಯರು ಸಾವು

ನೇತ್ರಾವತಿ ನದಿಯ ಪಕ್ಕ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಬಂಟ್ವಾಳ ಸಮೀಪ ನಡೆದಿದೆ.

ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 ) ಮೃತರಾದ ಬಾಲಕಿಯರು.

ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಿಂದ ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿ ಬದಿ ತೆರಳಿದ್ದರು. ಈ ವೇಳೆ ಮನೆಯವರ ಮುಂದೆ ಮಕ್ಕಳು ನೀರಿನ ಸಮೀಪ ಆಟ ಆಡುತ್ತಾ ಇದ್ದು, ಮನೆಯವರ ಮುಂದೆಯೇ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More articles

Latest article

Most read