ವಿಧಾನಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ಚಿವ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಸಮಸ್ಯೆಗಳಿಗೆ ತ್ವರಿತ ಹಾಗೂ ಪರಿಣಾಮಕಾರಿ ಸ್ಪಂದಿಸುವ ಉದ್ದೇಶವನ್ನು ಸಚಿವಾಲಯ ಹೊಂದಿದೆ ಎಂದರು.

ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತಕ್ಕೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪ ಉದ್ದೇಶದಿಂದ ಸಚಿವಾಲಯದ ಕಚೇರಿ ಸದಾ ಎಲ್ಲರಿಗೂ ಮುಕ್ತವಾಗಿರಲಿದೆ ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಹಾಗೂ ಮನವಿಗಳನ್ನು ಆಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. 

More articles

Latest article

Most read