ಸಂಚಾರ ದಟ್ಟಣೆ ನಿಯಂತ್ರಣ, ಅಪಘಾತ ತಪ್ಪಿಸಲು ಬೆಂಗಳೂರಿನ ಫ್ಲೈಓವರ್‌ ಸಂಚಾರಕ್ಕೆ ಹೊಸ ನಿಯಮ

ಬೆಂಗಳೂರು: ಅಪಘಾತಗಳನ್ನು ತಪ್ಪಿಸುವ ಸಲುವಾಗಿ ನಗರದ ಪ್ರಮುಖ ಫ್ಲೈಓವರ್‌ಗಳ ಮೇಲೆ ಸಂಚಾರಕ್ಕೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮವು ಸೆಪ್ಟೆಂಬರ್‌ 4 ರಿಂದ ಜಾರಿಗೆ ಬರಲಿದೆ ಎಂದು ಸಂಚಾರ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್,ಏರ್‌ಪೋರ್ಟ್‌ ರಸ್ತೆ ಫ್ಲೈ ಓವರ್‌,  ಪೀಣ್ಯ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸರಕು ಸಾಗಣೆ, ಆಟೋ ಹಾಗೂ ದ್ವಿಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹಾಗೆಯೇ,   ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್‌, ಸಿಲ್ಕ್‌ ಬೋರ್ಡ್‌ ರಾಗಿಗುಡ್ಡ ಸೇರಿದಂತೆ ನಗರದ ಪ್ರಮುಖ ಫ್ಲೈಓವರ್‌ಗಳ  ಮೇಲೆ  ಕೆಲ ನಿರ್ದಿಷ್ಟ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಆದೇಶಿಸಿದೆ.

ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್‌ ಮೇಲೆ ಭಾರಿ ಸರಕು ಸಾಗಣೆ ವಾಹನಗಳಿಗೆ ದಿನದ 24 ಗಂಟೆಯೂ ನಿಷೇಧ ಹೇರಲಾಗಿದೆ. ಇತರೆ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 7ರಿಂದ 11 ಮತ್ತು ಸಂಜೆ 4ರಿಂದ ರಾತ್ರಿ 10 ಗಂಟೆಯವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ . ಪೀಣ್ಯ ಎಲಿವೇಟೆಡ್ ಕಾರಿಡಾರ್‌ನಲ್ಲಿ ಆಟೋ ರಿಕ್ಷಾಗಳು ಮತ್ತು ತ್ರಿಚಕ್ರದ ಗೂಡ್ಸ್ ಆಟೋಗಳಿಗೆ 24 ಗಂಟೆಯೂ ನಿಷೇಧಿಸಲಾಗಿದೆ. ಭಾರಿ ಹಾಗೂ ಮಧ್ಯಮ ಸರಕು ವಾಹನಗಳಿಗೆ ಬೆಳಗ್ಗೆ 7ರಿಂದ 11 ಮತ್ತು ಸಂಜೆ 4 ರಿಂದ ರಾತ್ರಿ 10ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡವರೆಗಿನ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ದಿನದ 24 ಗಂಟೆಯೂ ನಿಷೇಧಿಸಲಾಗಿದೆ. ​ಸಂಜೀವ ನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ ಜಂಕ್ಷನ್‌ವರೆಗಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಲಿವೇಟೆಡ್ ಕಾರಿಡಾರ್‌ನಲ್ಲಿ ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳಿಗೆ ದಿನದ 24 ಗಂಟೆಯೂ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಹಾಗೂ ಎಲ್ಲಾ ವಿಧದ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ನಿರ್ಬಂಧವಿರಲಿದೆ.

ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್‌ನಲ್ಲಿ ದ್ವಿಚಕ್ರ ವಾಹನಗಳು, ಪ್ರಯಾಣಿಕರ ಆಟೋ ಹಾಗೂ ಗೂಡ್ಸ್ ಆಟೋಗಳಿಗೆ ದಿನದ 24 ಗಂಟೆಯೂ ನಿಷೇಧ ಹೇರಲಾಗಿದ್ದು, ಎಲ್ಲಾ ಮಾದರಿಯ ಸರಕು ಸಾಗಾಣಿಕೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ನಿರ್ಬಂಧ ವಿಧಿಸಲಾಗಿದೆ.

​ಈ ನೂತನ ನಿಯಮಗಳು ಬಿಜಿಎಸ್ ಫ್ಲೈಓವರ್, ಪೀಣ್ಯ ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ಫ್ಲೈಓವರ್ ಹಾಗೂ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ಸೆಪ್ಟಂಬರ್ 4ರಿಂದ ಜಾರಿಗೆ ಬರಲಿವೆ. ಎಲೆಕ್ಟ್ರಾನಿಕ್ ಸಿಟಿಯ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸೆಪ್ಟಂಬರ್ 11ರಿಂದ ಈ ನಿಯಮ ಅನ್ವಯವಾಗಲಿದೆ. ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

More articles

Latest article

Most read