ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ನೂತನ ಶಾಸಕಿ ಅನ್ನಪೂರ್ಣ ತುಕಾರಾಂ ಅವರು ಬಳ್ಳಾರಿ ಪ್ರವಾಸಕ್ಕಾಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶಾಸಕಿ ಅನ್ನಪೂರ್ಣ ಅವರಿಗೆ ಶುಭ ಹಾರೈಸಿದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅನ್ನಪೂರ್ಣ ಅವರು ಬಿಜೆಪಿಯ ಬಂಗಾರು ಹನುಮಂತು ಅವರನ್ನು ಪರಾಭವಗೊಳಿಸಿದ್ದರು. ಈ ಕ್ಷೇತ್ರದ ಶಾಸಕ ತುಕಾರಾಂ ಅವರು ಲೋಕಸಭೆಗೆ ಆಯ್ಕೆಯಾಗಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಸಿಎಂ ಅಭಿನಂದಿಸಿದ ಸಂಡೂರು ನೂತನ ಶಾಸಕಿ ಅನ್ನಪೂರ್ಣ