ಆಟೋ ಅಪಘಾತ; ವಧು ವರರು ದುರ್ಮರಣ

ಲಖನೌ: ಮದುವೆ ಮುಗಿಸಿಕೊಂಡು ವಧುವರರು ವರನ ಮನೆಗೆ ತೆರಳುತ್ತಿದ್ದ ಆಟೋ  ಅಪಘಾತಕ್ಕೀಡಾಗಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ  ಬಿಜ್ನೋರ್‌ನಲ್ಲಿ ನಡೆದಿದೆ. ಹರಿದ್ವಾರ –ಕಾಶಿಪುರ ಹೆದ್ಸಾರಿಯಲ್ಲಿ ನಡುರಾತ್ರಿ 2 ಗಂಟೆಗೆ ಅಪಘಾತ ಸಂಭವಿಸಿದೆ.

 ವಧುವರರು ಪ್ರಯಾಣಿಸುತ್ತಿದ್ದ ಆಟೋಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಧುವರರು  ಸೇರಿ ಏಳು ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃಥಪಟ್ಟವರಲ್ಲಿ ನಾಲ್ವರು ಪರುರಷರು, ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ದಟ್ಟವಾದ ಮಂಜು ಕವಿದಿದ್ಧೇ ಅಪಘಾತಕ್ಕೆ ಕಾರಣವಾಗಿದೆ. ಮೇಲಾಗಿ ವೇಗವಾಗಿ ಸಂಚರಿಸುತ್ತಿದ್ದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಇವರ ವಿವಾಹ ನೆರವೇರಿತ್ತು. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಎಲ್ಲ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.  

More articles

Latest article

Most read