ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.
ದೇಶವನ್ನು ಅಸ್ಥಿರಗೊಳಿಸುವ ಅಲ್ ಖೈದಾ ಉಗ್ರ ಸಂಘಟನೆಯ ಸಂಚಿನ ಭಾಗವಾಗಿ ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಸಂಘಟನೆಯ ನಂಟು ಹೊಂದಿದ್ದಾರೆ ಎಂಬ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಎನ್ ಐ ಎ ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಅಸ್ಸಾಂ ಸೇರಿದಂತೆ 9 ಕಡೆ ದಾಳಿ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ಈ ಕಾರ್ಯಾಚರಣೆ ಸಂದರ್ಭದಲ್ಲಿ ಎನ್ ಐ ಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.