ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ನಿಖಿಲ್ ಕುಮಾರಸ್ವಾಮಿ

Most read

ಚನ್ನಪಟ್ಟಣ : ಕ್ಷೇತ್ರದ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಕ್ಕೂರು, ಬಾಣಗಹಳ್ಳಿ, ಸೋಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಮುಖ ಮುಖಂಡರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸಭೆ ನಡೆಸಿ ಪಕ್ಷ ಸಂಘಟನೆ ಮತ್ತು ಪಕ್ಷ ಬಲವರ್ಧನೆ ಬಗ್ಗೆ ಚರ್ಚಿಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚನ್ನಪಟ್ಟಣ ಕ್ಷೇತ್ರಕ್ಕೆ ನನಗೆ ಟಿಕೆಟ್ ಆಗಲಿದೆ ಎಂದಿದ್ದ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಯೋಗೇಶ್ವರ್ ರವರ ಹೇಳಿಕೆಯನ್ನ ನಾನು ಗ್ರಹಿಸಿದ್ದೇನೆ.ಅವರು ಸ್ಪಷ್ಟವಾಗಿ ಹೇಳಿದ್ದಾರೆ ಜೆಡಿಎಸ್ – ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆಂದು ಅವರು ಹೇಳಿದ್ದಾರೆ.ನಿಖಿಲ್ ಅವರು ಸಹ ಅವರ ಪಕ್ಷದ ಬೆಂಬಲಿಗರ ವಿಶ್ವಾಸ ಪಡೆಯುತ್ತಿದ್ದಾರೆಂದು ಸ್ಪಷ್ಟವಾಗಿ ಹೇಳಿದ್ದಾರೆ.ಹಾಗಾಗಿ ಇಲ್ಲಿ ಯಾವುದೇ ಗೊಂದಲ ಇಲ್ಲ ಎಲ್ಲವೂ ಕೂಡ ಸುಗಮವಾಗಿ ಬಗೆ ಹರಿಯುತ್ತೆ. ಟಿಕೆಟ್ ವಿಚಾರವಾಗಿ ದೆಹಲಿಯ ನಾಯಕರು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡ್ತಾರೆ ಎಂದು ತಿಳಿಸಿದರು.

ಕಾನೂನು ಎಲ್ಲರಿಗೂ ಒಂದೇ

ಶಾಸಕ ಮುನಿರತ್ನ ಅರೆಸ್ಟ್ ವಿಚಾರಕ್ಕೆ ಮಾತನಾಡಿದ ಅವರು ಆ ಆಡಿಯೋ ದಲ್ಲಿರುವುದು ಅವರ ಧ್ವನಿನಾ ? ಅಲ್ಲವಾ ಎಂಬುದು FSL ವರದಿ ಬರಬೇಕಿದೆ ಹಾಗಾಗಿ ನಾವು ಈ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ. ಆದರೆ ಈ ನೆಲದ ಕಾನೂನಿನ ಮುಂದೆ ಎಲ್ಲರೂ ಒಂದೇ.ಎಷ್ಟೇ ಪ್ರಭಾವಿ ವ್ಯಕ್ತಿ ಆಗಿದ್ದರೂ ಸಹ ಕಾನೂನು ಎಲ್ಲರಿಗೂ ಒಂದೇ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

ನಾಗಮಂಗಲ ಗಲಭೆ ವಿಚಾರಕ್ಕೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ನಾಗಮಂಗಲ‌ ಘಟನೆ ಸಾಕ್ಷಿ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೇಳ್ತೇನೆ ಒಂದು ಸಮುದಾಯ ಓಲೈಸಲು ಇನ್ನೊಂದು ಸಮುದಾಯಕ್ಕೆ ಅನ್ಯಾಯ ಮಾಡುವುದು ಎಷ್ಟು ಸರಿ ಎಂದು ಸಚಿವ ಚಲುವರಾಯ ಸ್ವಾಮಿ ಅವರಿಗೆ ಪ್ರಶ್ನಿಸಿದರು.

ವರ್ಷಕ್ಕೊಮ್ಮೆ ಗಣೇಶನ ಹಬ್ಬ ಬರಲಿದೆ, ನಾವು ಒಂದು ತಿಂಗಳವರೆಗೂ ಗಣೇಶನನ್ನ ವಿಸರ್ಜನೆ ಮಾಡ್ತೇವೆ. ಮುಸ್ಲಿಂ ಸಮುದಾಯದವರು ದಿನಕ್ಕೆ 5 ಬಾರಿ ನಮಾಜ್ ಕೂಗುತ್ತಾರೆ.ನಾವು ಅದನ್ನ ಗೌರವಿಸುತ್ತೇವೆ. ಹಿಂದೂ – ಮುಸ್ಲಿಂ ಸಾಮರಸ್ಯ ಕದಡುತ್ತಿರುವುದು ಕಾಂಗ್ರೆಸ್ ಪಕ್ಷದವರು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಲಿ,ಮುಂದೆ ಜನರೇ ಇದಕ್ಕೆ ಉತ್ತರ ಕೊಡ್ತಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

More articles

Latest article