Sunday, July 14, 2024

ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವುದಿಲ್ಲ : ನಿಖಿಲ್ ಕುಮಾರಸ್ವಾಮಿ

Most read

ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿ ಮಾತನಾಡಿದರು.

ನಾನು ಪಕ್ಷದ ಕಾರ್ಯಕರ್ತನಾಗಿ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ. ಎರಡು ಬಾರಿ ಚಿಕ್ಕ ವಯಸ್ಸಿನಲ್ಲಿಯೇ ಚುನಾವಣೆಯಲ್ಲಿ ಸೋಲು ಕಂಡಿದ್ದೇನೆ. ಕೆಲ ರಾಜಕೀಯ ಷಡ್ಯಂತ್ರ್ಯಕ್ಕೆ ನಾನು ಬಲಿಯಾದೆ. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಪ್ರಶ್ನೆ ಅಪ್ರಸ್ತುತ. ಸೋತ ಮಾತ್ರಕ್ಕೆ ಮನೆಯಲ್ಲಿ ಕೂರುವುದಿಲ್ಲ, ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ ಇತರರು ಹಾಜರಿದ್ದರು.

More articles

Latest article