ಅಧಿಕಾರ ಎಲ್ಲಿ ಸಿಗುತ್ತೋ, CP ಯೋಗೇಶ್ವರ್ ಅಲ್ಲಿಗೆ ಜಂಪ್ ಆಗ್ತಾರೆ ಎಂದ ನಿಖಿಲ್ ಕುಮಾರಸ್ವಾಮಿ

Most read

ಅಧಿಕಾರ ಎಲ್ಲಿ ಸಿಗುತ್ತದೆಯೋ ಯೋಗೇಶ್ವರ್ ಅಲ್ಲಿಗೆ ಹೋಗುತ್ತಾರೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಸಿ.ಪಿ.ಯೋಗೇಶ್ವರ್ ಅವರು ಆಪರೇಶನ್ ಹಸ್ತಕ್ಕೆ ತುತ್ತಾದ ನಂತರ ಅವರು ಮಾಧ್ಯಮಗಳು ಕೇಳಿದ ಪ್ರಶೆಗಳಿಗೆ ಉತ್ತರಿಸಿದರು. ಅದಕ್ಕೂ ಮುನ್ನ ಅವರು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಯೋಗೇಶ್ವರ್ ಅವರಿಗೆ 25 ವರ್ಷ ರಾಜಕೀಯ ಅನುಭವವಿದೆ. ಅವರು ಒಂದು ಕಮಿಂಟ್ಮೆಂಟ್ ಇಟ್ಟುಕೊಂಡು ರಾಜಕೀಯ ಮಾಡಿಲ್ಲ. ಎಲ್ಲಿ ಅಧಿಕಾರ ಸಿಗುತ್ತೋ ಅಲ್ಲಿಗೆ ಜಂಪ್ ಆಗ್ತಾರೆ ಎಂದು‌ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದರು.

ಬಿಜೆಪಿ ನಾಯಕರ ಕಾರಣಕ್ಕೆ ಯೋಗೇಶ್ವರ್ ಪಕ್ಷ ಬಿಡುವ ವಿಚಾರ ಮಾಡಿಲ್ಲ. ನಮ್ಮಿಂದ ಯಾವುದೇ ತಪ್ಪು ಆಗಿಲ್ಲ. ಜೆಡಿಎಸ್ ಪಕ್ಷದಲ್ಲೇ ಅವರು ಸ್ಪರ್ಧೆ ಮಾಡಬಹುದಿತ್ತು‌. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಜತೆ ಚರ್ಚೆ ಮಾಡಬಹುದಿತ್ತು. ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ. ಕಳೆದ ಎರಡು ತಿಂಗಳಿಂದ ಯೋಗೇಶ್ವರ್‌ ಕಾಂಗ್ರೆಸ್ ಅವರ ಜತೆ ಸಂಪರ್ಕದಲಿದ್ದರು. ರಾಜಕಾರಣವನ್ನು ಅಳೆದುತೂಗಿ ಮಾಡುವ ಬುದ್ದಿಜೀವಿಗಳಿಗೆ ಮುಂದಿನ ಜೀವನ ಹೇಗಿರುತ್ತದೆ ಎಂದು ಅವರಿಗೆ ಗೊತ್ತಾಗುತ್ತದೆ ಎಂದರು.

ಕಾಂಗ್ರೆಸ್ ಬಳಿ 136 ಶಾಸಕರಿದ್ದಾರೆ. ಹೆಸರಿಗೆ ರಾಷ್ಟ್ರೀಯ ಪಕ್ಷ. ಆದರೆ ಅವರ ಬಳಿ ಅಭ್ಯರ್ಥಿ ಇಲ್ಲ. ಆಪರೇಶನ್ ಹಸ್ತ ಮಾಡಿದರು. ಬಿಜೆಪಿ ಅಭ್ಯರ್ಥಿಯನ್ನೇ ಹೈಜಾಕ್ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಸಹೋದರ ಡಿ.ಕೆ.ಸುರೇಶ್ ಅವರ ಸ್ಪರ್ಧೆ ಮಾಡುತ್ತಾರೆ ಎಂದು ಕಥೆ ಕಟ್ಟಲಾಯಿತು. ಈಗ ಯೋಗೇಶ್ವರ್ ಅವರಿಗೆ ಮಣೆ ಹಾಕಿರುವುದು ಆ ಪಕ್ಷ ದುಸ್ಥಿತಿಗೆ ಹಿಡಿದ ಕನ್ನಡಿ ಎಂದು ನಿಖಿಲ್‌ ಹೇಳಿದರು.

ಡಿ.ಕೆ.ಸುರೇಶ್ ಧೈರ್ಯ ಮಾಡಲಿಲ್ಲ, ಯಾಕೆ?

ಕಳೆದ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಸಚಿವರೂ ಸೇರಿದಂತೆ ಡಿ.ಕೆ ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾಕೆ ತಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಧೈರ್ಯ ಮಾಡಲಿಲ್ಲ? ಡಿ.ಕೆ.ಸುರೇಶ್ ನಿಲ್ಲುವ ಧೈರ್ಯ ಪ್ರದರ್ಶನ ಮಾಡಲಿಲ್ಲ ಯಾಕೆ? ಆದರೆ, ಹೊರಗಿನಿಂದ ಹೈಜಾಕ್ ಮಾಡಿ ಅಭ್ಯರ್ಥಿ ಮಾಡ್ತಿದ್ದಾರೆ ಯಾಕೆ? ಎಂದು ನಿಖಿಲ್ ಪ್ರಶ್ನಿಸಿದರು.

ನಾನು ಸ್ಪರ್ಧೆ ಮಾಡ್ತೀನಿ ಅಂತ ಹೇಳಿಲ್ಲ

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯ ವಿಚಾರಕ್ಕೆ ಮಾತನಾಡಿದ ಅವರು, ನಾನು ಎರಡು ತಿಂಗಳಿಂದ ಹೇಳಿಕೆ ಕೊಡ್ತಾ ಇದ್ದೇನೆ. ನಾನು ಸ್ಪರ್ಧೆ ಮಾಡ್ತೀನಿ ಎಂದು ಎಲ್ಲೂ ಹೇಳಿಕೆ ನೀಡಿಲ್ಲ. NDAಯಿಂದ ಫೈನಲ್ ಅಭ್ಯರ್ಥಿ ಘೋಷಣೆ ಆಗಬೇಕು ಎಂದರು.

ಲಕ್ಷಾಂತರ ಕಾರ್ಯಕರ್ತರ ದುಡಿಮೆಯಿಂದ ಕಟ್ಟಿರೋ ಪಕ್ಷ ನಮ್ಮದು..ಎರಡು ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡಿ ಅಭ್ಯರ್ಥಿಯನ್ನ ತೀರ್ಮಾನ ಮಾಡ್ತಾರೆ ಎಂದರು. ನನ್ನ ವೈಯಕ್ತಿಕ ಅಭಿಪ್ರಾಯ ಪ್ರಕಾರ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಅಧಿಕಾರ ಸಿಕ್ಕಿದ್ರೆ ಅದು ನಿಖಿಲ್ ಕುಮಾರಸ್ವಾಮಿಗೆ ಸಿಕ್ಕ ಅಧಿಕಾರ ಎಂದರು.

NDA ಸಂಬಂಧಕ್ಕೆ ಧಕ್ಕೆ ಬರಬಾರದು

ನಮ್ಮ‌ NDA ಸಂಬಂಧಕ್ಕೆ ಯಾವುದೇ ಚ್ಯುತಿ ಬರಬಾರದು. ನಮ್ಮಿಂದ ಯಾವುದೇ ಪ್ರಶ್ನೆ ಎದುರಾಗಬಾರದು ಎಂದಿದ್ದಾರೆ. ಯಾವುದೇ ಉದ್ವೇಗಕ್ಕೆ ಒಳಗಾಗಿ ಸಾವರ್ಜನಿಕ ಚರ್ಚೆಗೆ ತೀರ್ಮಾನ ಮಾಡಬಾರದು ಎಂದರು ನಿಖಿಲ್ ಅವರು.

ಇವತ್ತು ಸೋಲು ಗೆಲವು ನಿರ್ಧಾರ ಮಾಡೋದು ಜನರು. ಚನ್ನಪಟ್ಟಣದಲ್ಲಿ ಯಾವ ರೀತಿ ರಾಜಕೀಯವಾಗಿ ಬೆಳವಣಿಗೆ ಆಗುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಅಲ್ಲಿನ ಜನರು ಪ್ರಬುದ್ದರಿದ್ದಾರೆ.13ನೇ ತಾರೀಖು ಅವರು ನಿರ್ಧಾರ ಮಾಡುತ್ತಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಅವರು ಹೇಳಿದರು ಎಂದರು.

ದೇವೇಗೌಡರು ಕರೆ ಮಾಡಿದ್ದರು, ಇಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ದೇವೇಗೌಡರು ಹೇಳಿದ್ದು ಒಂದೇ. ಲೋಕಸಭೆ ಚುನಾವಣೆ ಸಮಯದಲ್ಲಿ NDA ಮೈತ್ರಿ ಮಾಡಿಕೊಂಡ ತೀರ್ಮಾನಕ್ಕೆ ರಾಜ್ಯದ ಜನತೆ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಗೆ ಆರ್ಶೀವಾದ ಮಾಡಿದ್ದಾರೆ ಎಂದರು.

ಚನ್ನಪಟ್ಟಣ ತಾಲೂಕಿನ ಜೆಡಿಎಸ್ ಅಧ್ಯಕ್ಷ ಜಯಮತ್ತು ಈ ಸಂದರ್ಭದಲ್ಲಿ ನಿಖಿಲ್ ಅವರ ಜತೆಯಲ್ಲಿ ಇದ್ದರು.

More articles

Latest article