Sunday, July 14, 2024

ಕೇವಲ 59 ನಿಮಿಷದಲ್ಲಿ ದೇಶದ ಸಂಪೂರ್ಣ ಬಜೆಟ್ ಮಂಡಿಸಿದ ನಿರ್ಮಲ ಸೀತಾರಾಮನ್

Most read

ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಮಧ್ಯಂತರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಒಂದು ತಾಸಿನ ಒಳಗಡೆ ಮಂಡಿಸಿದ್ದಾರೆ.

ಇಂದು(1 ಪೆಬ್ರವರಿ‌ 2024 ) ಮಂಡಿಸಲು ತೆಗೆದುಕೊಂಡ ಸಮಯ ಕೇವಲ 59 ನಿಮಿಷ 15 ಸೆಕೆಂಡ್ ಗಳು. ಕಳೆದ ಬಾರಿ‌ 2019 ರಲ್ಲಿ 2 ಗಂಟೆ 17 ನಿಮಿಷ ತೆಗೆದುಕೊಂಡರೆ, 2020 ರಲ್ಲಿ ‌ 2 ಗಂಟೆ 40 ನಿಮಿಷಗಳನ್ನು ತೆಗೆದುಕೊಂಡಿದ್ದರು.

ವಿತ್ತ ಸಚಿವರಾದ ನಿರ್ಮಲ ಸೀತಾರಾಮನ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷದ ಆಡಳಿತದಲ್ಲಿ ದೇಶವು ಸಕಾರಾತ್ಮಕ ಮುನ್ನಡೆ ಹೊಂದಿದೆ ಎಂದರು. ಬಜೆಟ್ ಮಂಡನೆ ವೇಳೆ ಆರ್ಥಿಕ ಸ್ಥಿತಿಗತಿಯ ಕುರಿತಾಗಿ ಸರ್ಕಾರವು ಶ್ವೇತ ಪತ್ರ ಹೊರಡಸಲಿದೆ ಎಂದು ಹೇಳಿದ್ದಾರೆ.

ಬಜೆಟ್ ಮಂಡನೆಯ ಮುಖ್ಯಾಂಶಗಳು;-

ಜೈ ಹಿಂದ್ಸೈನ್ ಆಫ್ ಮಾಡಿದ ನಿರ್ಮಲಾ ಸೀತಾರಾಮನ್

 • ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ತಮ್ಮ 57 ನಿಮಿಷಗಳ ಬಜೆಟ್ ಭಾಷಣವನ್ನು “ಜೈ ಹಿಂದ್” ಎಂದು ಹೇಳುವ ಮೂಲಕ ಮುಕ್ತಾಯಗೊಳಿಸಿದರು. 

ತೆರಿಗೆದಾರರಿಗೆ ಧನ್ಯವಾದಗಳು‘ ; ಸೀತಾರಾಮನ್

 • ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಸಂಗ್ರಹವು ದುಪ್ಪಟ್ಟಾಗಿದೆ. ಈ ಮೂಲಕ ನಾನು ತೆರಿಗೆದಾರರಿಗೆ ಧನ್ಯವಾದ ಹೇಳಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

2014 ಪೂರ್ವದಸವಾಲುಗಳಕುರಿತು ನಿರ್ಮಲಾ ಸೀತಾರಾಮನ್

 • ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ “ನೀತಿಗಳು ಮತ್ತು ಆಡಳಿತ” “2014 ರ ಹಿಂದಿನ ಯುಗದ ಪ್ರತಿಯೊಂದು ಸವಾಲನ್ನು” ಸಮರ್ಪಕವಾಗಿ ಎದುಕಿಸಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ

 • ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು

ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

 • ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ. ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ

 • ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳ ವಿಸ್ತರಿಸಣೆ ಮಾಡಲಾಗುತ್ತದೆ.

ಹೊಸ ಮನೆ ಖರೀದಿಗೆ ನೆರವು

 • ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ.

ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ

 • ತೆರಿಗೆ ಕುರಿತು ಯಾವುದೇ ಬದಲಾವಣೆಗಳನ್ನು ಮಾಡಲು ಪ್ರಸ್ತಾಪಿಸುವುದಿಲ್ಲ. ಆಮದು ಸುಂಕಗಳು ಸೇರಿದಂತೆ ನೇರ ಮತ್ತು ಪರೋಕ್ಷ ತೆರಿಗೆ ದರಗಳಿಗೆ ಈಗಿರುವ ತೆರಿಗೆಯೇ ಮುಂದುವರೆಯಲಿದೆ. ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ

 • ಭಾರತ ಪ್ರಪಂಚದಲ್ಲಿ ಹಾಲು ಉತ್ಪಾದನೆಯಲ್ಲಿ ಮಂದಿದೆ. ಹೈನುಗಾರಿಕೆ ರೈತರಿಗೆ ಹಾಲು ಹೆಚ್ಚಳಕ್ಕೆ ಯೋಜನೆ ಮಾಡಲಾಗಿದೆ. ಡೇರಿಗೆ ಮೂಲಭೂತ ಸೌಕರ್ಯಗಳ ಹೆಚ್ಚಳ. ಡೈರಿಗಳಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ನಡಿ ಹೆಚ್ಚು ಪ್ರೋತ್ಸಾಹ.

ವಂದೇ ಭಾರತ್ ಮಾದರಿಯ ಬೋಗಿಗಳು, ವಿಮಾನ ನಿಲ್ದಾಣಗಳು ದ್ವಿಗುಣ

 • 40,000 ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತಿಸಲಾಗುವುದು. ವಿಮಾನ ನಿಲ್ದಾಣಗಳನ್ನು 149ಕ್ಕೆ ಏರಿಸಲಾಗುವುದು. 1,000 ಹೊಸ ವಿಮಾನಗಳಿಗೆ ಈಗಾಗಲೇ ಆರ್ಡರ್ ಮಾಡಿದೆ ಎಂದು ಹೇಳಿದದ್ದಾರೆ.

300 ಯೂನಿಟ್ ಉಚಿತ ವಿದ್ಯುತ್

 • ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು.

ಮೀನುಗಾರಿಕೆ ಯೋಜನೆಯನ್ನು ಉತ್ತೇಜನ

 • ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ.
 • ಮೀನುಗಾರಿಕೆಯಲ್ಲಿ 55 ಲಕ್ಷ ಹೊಸ ಉದ್ಯೋಗ ಸೃಷ್ಟಿ. ಮೀನುಗಾರಿಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ. ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರರಿಗೆ ಸಹಾಯ. ಮೀನುಗಾರಿಕೆ ಬೂಸ್ಟ್ ನೀಡುತ್ತಿರುವ ಮತ್ಸ್ಯ ಸಂಪದ ಯೋಜನೆ.

ಲಖ್​ಪತಿ ದೀದಿ ಯೋಜನಾ

 • ಲಖ್​ಪತಿ ದೀದಿ ಯೋಜನೆ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು.

2047ರ ವೇಳೆಗೆ ವಿಕಸಿತ ಭಾರತಕ್ಕಾಗಿ ಯೋಜನೆ

 • 2047 ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ-ನಿರ್ಮಲಾ ಸೀತಾರಾಮನ್

ಮಹಿಳಾ ಸಬಲೀಕರಣ ನಮ್ಮ ಹೊಣೆ

 • ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರಗೊಳಿಸಲಾಗಿದೆ. ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಶಾಸಕಾಂಗ ಸ್ಥಾನಗಳನ್ನು ಮೀಸಲಿಡುವುದು ಸರ್ಕಾರದ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಎತ್ತಿ ತೋರಿಸುತ್ತದೆ.

ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜನೆ

 • ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ವೈದ್ಯಕೀಯ ಮೂಲಸೌಕರ್ಯವನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ನಮ್ಮ ಸರ್ಕಾರ ಯೋಜಿಸಿದೆ.

‘ಸ್ಕಿಲ್ ಇಂಡಿಯಾ ಮಿಷನ್’ ಶ್ಲಾಘಿಸಿದ ಸೀತಾರಾಮನ್

 • ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಸ್ಕಿಲ್ ಇಂಡಿಯಾ ಮಿಷನ್ ಅನ್ನು ಶ್ಲಾಘಿಸಿದರು, ಇದು 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ಕೌಶಲ್ಯವನ್ನು ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ ಎಂದು ಹೇಳಿದರು. ಉನ್ನತ ಶಿಕ್ಷಣಕ್ಕಾಗಿ 7 ಐಐಟಿಗಳು, 16 ಐಐಐಟಿಗಳು, 7 ಐಐಎಂಗಳು, 15 ಎಐಐಎಂಎಸ್ ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ” ಎಂದು ಅವರು ಹೇಳಿದರು.

25 ಕೋಟಿ ಜನ ಬಡತನ ರೇಖೆಯಿಂದ ಮುಕ್ತ

 • ಕಳೆದ 10 ವರ್ಷಗಳಲ್ಲಿ, 25 ಕೋಟಿ ಜನರು ಬಡತನದಿಂದ ಮುಕ್ತರಾಗಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
 • ನಮ್ಮ ಸರ್ಕಾರಕ್ಕೆ ಇರುವುದು ನಾಲ್ಕು ಜಾತಿ ಮಾತ್ರ. ಅದು ಬಡವರು, ಮಹಿಳೆಯರು, ಯುವಕರು ಮತ್ತು ರೈತರು. ಇವರ ಅಭಿವೃದ್ಧಿಯೇ ನಮ್ಮಮಹೊಣೆ.

10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಬದಲಾವಣೆ ಕಂಡಿದೆ

 • 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಬದಲಾವಣೆ ಕಂಡಿದೆ. ಮೋದಿ ನೇತೃತ್ವದಲ್ಲಿ ದೇಶದಲ್ಲಿ ಹಲವು ಬದಲಾವಣೆ. ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಉದ್ಯೋಗ, ಉದ್ದಿಮೆಗೆ ಹಲವು ಅವಕಾಶ ಕಲ್ಪಿಸಲಾಗಿದೆ. 2ನೇ ಅವಧಿಯಲ್ಲಿ ಎಲ್ಲಾ ಜನರ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡಿದೆ, ಮಾಡುತ್ತಿದೆ. 

ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್!

 • ಪ್ರತಿಯೊಬ್ಬರಿಗೂ ಸರ್ಕಾರದ ಯೋಜನೆ ತಲುಪಿದೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್ ಮಂತ್ರ ಜಪಸಿದ ನಿರ್ಮಲಾ ಸೀತಾರಾಮನ್‌.

More articles

Latest article