ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

Most read

ಬೆಂಗಳೂರು: ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿರುವ ನೋಟೀಸ್‌ಗೆ 74 ಗಂಟೆಗಳಲ್ಲಿ ಉತ್ತರ ನೀಡುತ್ತೇನೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾಂಗ್ರೆಸ್ ಸೇರುವ ಉದ್ದೇಶವಿಲ್ಲ. ಸಾಕಷ್ಟು ಬಹುಮತ ಹೊಂದಿರುವ ಆ ಪಕ್ಷಕ್ಕೆ ನಮ್ಮ ಅಗತ್ಯವೂ ಇಲ್ಲ. 2028ಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದೆ. ಆಗ ಎಲ್ಲಿಂದ ಸ್ಪರ್ಧಿಸಬೇಕು ಎಂಬುದನ್ನು ಕಾರ್ಯಕರ್ತರ ಜತೆ ಚರ್ಚಿಸಿ ತೀರ್ಮಾನಿಸುತ್ತೇನೆ ಎಂದು ಅವರು ಹೇಳಿದರು. ಪಕ್ಷದ ರಾಜ್ಯ ನಾಯಕರು ಯಾವುದೇ ಸಭೆಗೂ ನನ್ನನ್ನು ಆಹ್ವಾನಿಸುತ್ತಿಲ್ಲ, ಶಾಸಕಾಂಗ ಪಕ್ಷದ ಸಭೆಗೂ ಕರೆಯುತ್ತಿಲ್ಲ, ಲೋಕಸಭಾ ಚುನಾವಣೆ, ವಿಧಾನಪರಿಷತ್ ಚುನಾವಣೆ ವೇಳೆ ಪ್ರಚಾರಕ್ಕೆ ಕರೆಯದೇ ನನ್ನನ್ನು ನಿರ್ಲಕ್ಷಿಸಲಾಗಿದೆ. ಹಗಾಗಿ ಯಾವುದೇ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆಉತ್ತರಿಸಿದರು.

More articles

Latest article