ಈಗಿನ ಜನಸಂಖ್ಯೆ ಆಧರಿಸಿ ಕ್ಷೇತ್ರ ಮರುವಿಂಗಡನೆ ಬೇಡ: ಎಂ.ಕೆ. ಸ್ಟಾಲಿನ್‌

Most read

ಚೆನ್ನೈ: ಈಗಿನ ಜನಸಂಖ್ಯೆಯನ್ನು ಆಧರಿಸಿ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಮಾಡಬಾರದು. ನಾವು ಒಟ್ಟಾಗಿ ಅದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕರೆ ನೀಡಿದ್ದಾರೆ.

ಕ್ಷೇತ್ರ ಮರುವಿಂಗಡನೆಯು ಸಂಸತ್‌ ನಲ್ಲಿ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯವನ್ನು ಕಡಿಮೆ ಮಾಡುತ್ತದೆ. ನಮ್ಮ ಅಭಿಪ್ರಾಯವನ್ನು ದಾಖಲಿಸುವವರ ಸಂಖ್ಯೆ ಕಡಿಮೆಯಾಗಲಿದೆ. ನಮ್ಮ ಪ್ರಾತಿನಿಧ್ಯ ಕಡಿಮೆಯಾದರೆ, ರಾಜ್ಯಗಳು ಅನುದಾನ ಪಡೆಯಲು ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ನಮ್ಮ ಅಭಿಪ್ರಾಯ ಪಡೆಯದೆ ಕಾನೂನುಗಳನ್ನು ರೂಪಿಸಲಾಗುತ್ತದೆ. ನಿರ್ಧಾರಗಳು ನಮ್ಮ ಜನರ ಮೇಲೆ ಪರಿಣಾಮ ಬೀರಲಿದೆ. ಪ್ರಮುಖ ಅವಕಾಶಗಳು ನಮ್ಮ ವಿದ್ಯಾರ್ಥಿಗಳ ಕೈತಪ್ಪಲಿವೆ. ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಬೀರಲಿದೆ. ನಾಗರಿಕರು ತಮ್ಮ ದೇಶದಲ್ಲೇ ರಾಜಕೀಯ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಪ್ರಜಾಸತ್ತಾತ್ಮಕ ಪ್ರಾತಿನಿಧ್ಯವನ್ನು ಬಲಪಡಿಸುವ ಯಾವುದನ್ನೂ ನಾವು ವಿರೋಧಿಸುವುದಿಲ್ಲ. ಆ ಪ್ರಕ್ರಿಯೆ ಮುಕ್ತವಾಗಿರಬೇಕು. ರಾಜಕೀಯ ಪ್ರಾತಿನಿಧ್ಯದ ಮೇಲೆ ಪ್ರಭಾವ ಬೀರಬಾರದು. ಇದು ಮರುವಿಂಗಡನೆಯ ವಿರುದ್ಧದ ಹೋರಾಟವಲ್ಲ. ಇದು ನ್ಯಾಯಯುತ ಮರುವಿಂಗಡನೆಗಾಗಿ ನಮ್ಮ ಆಗ್ರಹ ಎಂದರು.

ಈ ಸಭೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ, ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್ ಬಿ.ಆರ್.ಎಸ್ ಪಕ್ಷದ ನಾಯಕ ಕೆ.ಟಿ ರಾಮ ರಾವ್ ನಾಯಕ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.

More articles

Latest article