ತಾನು ಜೀವಂತವಾಗಿ ಇರುವವವರೆಗೂ ಯಾರೊಬ್ಬರೂ ಉತ್ತರಾಧಿಕಾರಿ ಇರುವುದಿಲ್ಲ:ಮಾಯಾವತಿ ಘೋಷಣೆ

ಲಖನೌ: ತಾನು ಜೀವಂತವಾಗಿ ಇರುವವವರೆಗೂ ಯಾರೊಬ್ಬರೂ ಉತ್ತರಾಧಿಕಾರಿ ಇರುವುದಿಲ್ಲ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲ ಹುದ್ದೆಗಳಿಂದ ವಜಾಗೊಳಿಸಿದ್ದಾರೆ. ಪಕ್ಷದ ಪದಾಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

ಮಾಯಾವತಿ ಅವರು ಈ ಹಿಂದೆ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ಉತ್ತಾರಾಧಿಕಾರಿಯಾಗಿ ಘೋಷಿಸಿದ್ದರು. ಬಳಿಕ ತಮ್ಮ ಸಹೋದರ ಆನಂದ್ ಕುಮಾರ್ ಮತ್ತು ರಾಮ್ಜಿ ಗೌತಮ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಿದ್ದರು. ಇದೀಗ ಪಕ್ಷದ ಎಲ್ಲಾ ಹುದ್ದೆಗಳಿಂದ ಆಕಾಶ್ ಆನಂದ್ ಅವರನ್ನು ವಜಾಗೊಳಿಸಿದ್ದಾರೆ. ಗುಂಪುಗಾರಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಮೇಲೆ ಆಕಾಶ್ ಆನಂದ್ ಅವರ ಮಾವ ಅಶೋಕ್ ಸಿದ್ದಾರ್ಥ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವುದಾಗಿ ಕಳೆದ ತಿಂಗಳು ಅವರು ಘೋಷಿಸಿದ್ದರು.

ಪಕ್ಷವನ್ನು ಬಲಪಡಿಸಲು ಮತ್ತು ಸಾಂಸ್ಥಿಕ ನ್ಯೂನತೆಗಳನ್ನು ಪರಿಹರಿಸಲು ಈ ಸಭೆಯನ್ನು ನಡೆಸಲಾಗಿದೆ. ಹೆಚ್ಚುತ್ತಿರುವ ಹಣದುಬ್ಬರ, ಬಡತನ, ನಿರುದ್ಯೋಗ ಕುರಿತೂ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಸರ್ಕಾರ ಇವುಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಮಾಯಾವತಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

More articles

Latest article

Most read